ಉಳ್ಳಾಲ: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಬೈಕ್ ಅಡ್ಡಗಟ್ಟಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಯಾದ ವ್ಯಕ್ತಿ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.

'ಮೇಲ್ನೋಟಕ್ಕೆ ಇದು ಕೊಲೆಯೆಂದು ಕಂಡು ಬಂದಿದ್ದು, ತನಿಖೆ ನಡೆಯುತ್ತಿದೆ. ಬಿಎನ್ಎಸ್ ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರಿಫ್ ಮೇಲೆ ಈ ಹಿಂದೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ದಾಖಲಿಸಲಾಗಿತ್ತು' ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ದುಷ್ಕರ್ಮಿಗಳು ಮೇಲ್ಸೇತುವೆ ಬಳಿ ಕಾಯುತ್ತ ಕುಳಿತು, ಆರಿಫ್ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಬಲವಾಗಿ ಹೊಡೆದಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲದಿಂದ ಯಾವುದೇ ಪ್ರಕರಣ ಇರಲಿಲ್ಲ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಅವರ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.

ಕುದ್ರೋಳಿ ನಿವಾಸಿಯಾಗಿದ್ದ ಆರಿಫ್, ಆರೇಳು ವರ್ಷಗಳಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಮೂವರು ಗಂಡು ಮಕ್ಕಳು, ಪುತ್ರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.