ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ನಿಂದ ಉಳ್ಳಾಲ ಬೈಲ್ವರೆಗಿನ ರಸ್ತೆ ವಿಸ್ತರಣೆ ಕಾಮಗಾರಿ ₹ 38 ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ನಡೆಯಲಿದೆ. 75 ವರ್ಷಗಳಿಂದ ಬೇಡಿಕೆಯಲ್ಲಿದ್ದ ಒಳಪೇಟೆ ಸಂಪರ್ಕಿಸುವ ರೈಲ್ವೆ ಅಂಡರ್ಪಾಸ್ ಕಾಮಗಾರಿ ನಡೆಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ₹ 2 ಕೋಟಿ ವೆಚ್ಚದಲ್ಲಿ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲು ಹಳಿಗೆ ಅಂಡರ್ಪಾಸ್ ನಿರ್ಮಾಣ ಮತ್ತು ರೈಲ್ವೇ ಓವರ್ಬ್ರಿಡ್ಜ್ ವಿಸ್ತರಣೆಗೆ ಸಂಬಂಧಿಸಿ ರೈಲ್ವೇ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ತೊಕ್ಕೊಟ್ಟು ಒಳಪೇಟೆ ರಾಷ್ಟ್ರೀಯ ಹೆದ್ದಾರಿಯಿಂದ ಉಳ್ಳಾಲ ನಗರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ರೈಲು ಹಳಿಯನ್ನು ದಾಟಿಕೊಂಡು ಸಾರ್ವಜನಿಕ ಮೈದಾನ, ಮಾರ್ಕೆಟ್, ಶಾಲಾ ಕಾಲೇಜು, ದರ್ಗಾ, ದೇವಸ್ಥಾನ, ಚರ್ಚ್ಗೆ ಪ್ರತಿ ದಿನ ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬರುತ್ತಿದ್ದಾರೆ. ಕೆಲವೊಂದು ಕಡೆ ಅನಾಹುತಗಳು ಆಗಿದ್ದವು. ಈ ಬಗ್ಗೆ ರೈಲ್ವೆ ಇಲಾಖೆಯವರು ಹಲವು ವರ್ಷದಿಂದ ಈ ರಸ್ತೆಯನ್ನು ಬಂದ್ ಮಾಡಲು ಬೇಡಿಕೆ ಇಟ್ಟಿದ್ದರೂ ಸಂದರ್ಭಕ್ಕೆ ಅನುಗುಣವಾಗಿ ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ನಿಲ್ಲಿಸಿದ್ದೆವು ಎಂದರು.

ಕೇಂದ್ರ ರೈಲ್ವೆ ಇಲಾಖೆಯವರು ಚೆನ್ನೈ ಕಚೇರಿ ಮೂಲಕ ಅಂಡರ್ಪಾಸ್ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ. ಈ ಅಂಡರ್ಪಾಸ್ನಲ್ಲಿ ಜನಸಾಮಾನ್ಯರು ನಡೆದುಕೊಂಡು ಹೋಗಲು ಮತ್ತು ದ್ವಿಚಕ್ರವಾಹನ ಸಂಚರಿಸಲು ಅವಕಾಶ ಇದೆ. ಇದರೊಂದಿಗೆ ಉಳ್ಳಾಲ ನಗರವನ್ನು ಸಂಪರ್ಕಿಸುವ ಓವರ್ಬ್ರಿಡ್ಜ್ ವಿಸ್ತರಣೆಗೂ ಒಪ್ಪಿಗೆ ಸಿಕ್ಕಿದ್ದು, ₹ 3 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಎಂದರು.

ಉಳ್ಳಾಲ ಜಂಕ್ಷನ್ನಿಂದ ಉಳ್ಳಾಲಬೈಲುವರೆಗೆ ದ್ವಿಪಥ ರಸ್ತೆಯೊಂದಿಗೆ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಉಳ್ಳಾಲ ಬೈಲ್ನಿಂದ ರಾಷ್ಟ್ರೀಯ ಹೆದ್ದಾರಿ 66ರ ಸಂಪರ್ಕಿಸುವ ತೊಕ್ಕೊಟ್ಟು ಓವರ್ಬ್ರಿಡ್ಜ್ಗೆ ರಸ್ತೆ ವಿಸ್ತರಣೆ ಕಾಮಗಾರಿ ₹ 35 ಕೋಟಿ ವೆಚ್ಚದಲ್ಲಿ ನಡೆಯಲಿದ್ದು, ಯೋಜನೆ ಸಿದ್ಧಗೊಂಡು ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಬಾಕಿ ಇದೆ ಎಂದರು.

ಮಂಗಳೂರು ಸಹಾಯಕ ವಿಭಾಗೀಯ ಎಂಜಿನಿಯರ್ ಅಶೋಕ್, ಮಂಗಳೂರು ಹಿರಿಯ ಸೆಕ್ಷನ್ ಎಂಜಿನಿಯರ್ ಮುಹಸಿನ್, ಕಣ್ಣೂರು ಹಿರಿಯ ಸೆಕ್ಷನ್ ಇಂಜಿನಿಯರ್ ಅಕ್ಷಯ್, ಉಳ್ಳಾಲ ನಗರ ಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಸಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್, ನಗರ ಸಭಾ ಸದಸ್ಯರಾದ ಅಯ್ಯೂಬ್ ಮಂಚಿಲ, ಗೀತಾಬಾಯಿ, ರವಿಚಂದ್ರ ಗಟ್ಟಿ, ನಗರ ಸಭೆ ಆಯುಕ್ತ ನವೀನ್ ಹೆಗ್ಡೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.