ಮಂಗಳವಾರ, ಏಪ್ರಿಲ್ 20, 2021
32 °C

ನಗರಸಭೆ ಅಧ್ಯಕ್ಷೆಗೆ ಕೋವಿಡ್: ಉಳ್ಳಾಲದಲ್ಲಿ ಪಾಸಿಟಿವ್, ಕೆಎಂಸಿಯಲ್ಲಿ ನೆಗೆಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಕೋವಿಡ್ ದೃಢವಾಗಿದ್ದ ಉಳ್ಳಾಲ ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಮರುಪರೀಕ್ಷೆ ನಡೆಸಿದ ವರದಿಯಲ್ಲಿ ನೆಗೆಟಿವ್ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ವರದಿಯನ್ನು ಅವರು ಹಾಕಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡು ಬಂದಿತ್ತು. ಸೋಮವಾರ ಉಳ್ಳಾಲ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಅಲ್ಲಿ ಕೋವಿಡ್ ಪಾಸಿಟಿವ್ ಅನ್ನುವ ವರದಿ ಬಂದಿತ್ತು. ವರದಿಯಿಂದ ಅಸಮಾಧಾನಗೊಂಡಿದ್ದ ಅಧ್ಯಕ್ಷೆ ಮತ್ತೆ ಕೆಎಂಸಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ್ದರು. ಅಲ್ಲಿನ ವರದಿಯಲ್ಲಿ ನೆಗೆಟಿವ್ ಬಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಗರಸಭೆ ಅಧ್ಯಕ್ಷೆ ಚಿತ್ರಾ ಚಂದ್ರಕಾಂತ್ ವರದಿಯನ್ನು ಹಂಚಿಕೊಂಡಿದ್ದಾರೆ. ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಒಂದು ವಾರ ಮನೆಯಲ್ಲೇ ಇದ್ದು ಹೋಂ ಕ್ವಾರಂಟೈನ್ ಆಗಿರುವುದಾಗಿಯೂ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು