ಉಳ್ಳಾಲ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ₹ ನೂರು ಕೊಟ್ಟು ₹ ಸಾವಿರಕ್ಕೆ ಕನ್ನ ಹಾಕುತ್ತಿದೆ. ಇದು ಪಿಕ್ ಪಾಕೆಟ್ ಸರ್ಕಾರ. ಇದರ ವಿರುದ್ಧ ಇದೇ 9ರಂದು ನಡೆಯಲಿರುವ ಜನಾಕ್ರೋಶ ಯಾತ್ರೆಯಲ್ಲಿ ಮಂಗಳೂರು ಮಂಡಲದಿಂದ 3000 ಮಂದಿ ಭಾಗವಹಿಸಲಿದ್ದಾರೆ’ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರ ದುಬಾರಿ ಸರ್ಕಾರದಿಂದ ಜನರು ತತ್ತರಿಸಿದ್ದಾರೆ. ಹಾಲಿನ ದರ ಸತತ ಮೂರನೇ ಬಾರಿ ಏರಿಕೆ ಆಗಿದೆ. ಆದರೆ ಐದು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿಲ್ಲ. ಎರಡು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಸ್ಟ್ಯಾಂಪ್ ಪೇಪರ್ ಶುಲ್ಕ ಐದು ಪಟ್ಟು, ಜನನ ಮರಣ ಪ್ರಮಾಣಪತ್ರ ಶುಲ್ಕ ಹತ್ತು ಪಟ್ಟು ಏರಿಕೆಯಾಗಿದೆ. ಕರೆಂಟ್ ಫ್ರೀ ಎನ್ನುತ್ತಾ ವಿದ್ಯುತ್ ದರ ದುಪ್ಪಟ್ಟು ಮಾಡಿದ್ದಾರೆ ಎಂದರು.

ಜಿಲ್ಲಾ ಬಿಜೆಪಿ ವಕ್ತಾರ ಮೋಹನ್ರಾಜ್ ಕೆ.ಆರ್, ಮಂಗಳೂರು ಮಂಡಲ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟು, ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.