ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಜು 26ರಿಂದ ಕಾಲೇಜು ಆರಂಭ

ಕೋವಿಡ್-19 ಮಾರ್ಗಸೂಚಿ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೊಸ ಆದೇಶ
Last Updated 21 ಜುಲೈ 2021, 3:35 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಲಾಕ್‌ಡೌನ್‌ ನಿರ್ಬಂಧವನ್ನು ಸಿನಿಮಾ ಮಂದಿರ, ಪದವಿ ಶಿಕ್ಷಣ, ತಾಂತ್ರಿಕ, ಕೌಶಲಾಭಿವೃದ್ಧಿ ತರಬೇತಿ ಸಂಸ್ಥೆಗಳಿಗೆ ಅನ್ವಯಿಸಿದಂತೆ ಷರತ್ತುಬದ್ಧವಾಗಿ ಸಡಿಲಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಈಗಾಗಲೇ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಇರಲಿದೆ.

ಸಿನಿಮಾ ಮಂದಿರ ಅರ್ಧ ಭರ್ತಿ:ಕೋವಿಡ್ ಮಾದರಿ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಸಿನಿಮಾ ಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಸಭಾಂಗಣಗಳು ಮತ್ತು ಸಭಾಂಗಣದಂಥ ಇತರ ಸ್ಥಳಗಳಿಗೆ ಆಸನ ಸಾಮರ್ಥ್ಯದ ಶೇ 50 ರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

26ರಿಂದ ಕಾಲೇಜು ಶುರು:ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳು ಮತ್ತು ಸಂಸ್ಥೆಗಳನ್ನು ಜುಲೈ 26 ರಿಂದ ಮರು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಕೋವಿಡ್ ತಡೆ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ, ಇತರ ಸಿಬ್ಬಂದಿಗೆ ಮಾತ್ರ ಕಾಲೇಜು, ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳ ಹಾಜರಾತಿಯು ಐಚ್ಛಿಕವಾಗಿರುತ್ತದೆ. ‌‌

ಕೋವಿಡ್ ನಿಯಮ ಪಾಲಿಸಿ ದೀರ್ಘಾವಧಿಯ ತಾಂತ್ರಿಕ ಕೋರ್ಸ್‌, ಕೌಶಲ ಅಭಿವೃದ್ಧಿ ತರಬೇತಿ ತರಗತಿ ಆರಂಭಿಸಬಹುದು. ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ, ಇತರ ಸಿಬ್ಬಂದಿಕೋವಿಡ್ ತಡೆ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದಿದ್ದರೆ ಹಾಜರಾಗಲು ಅನುಮತಿ ನೀಡಲಾಗಿದೆ.

ಜುಲೈ 3 ರಂದು ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ಎಲ್ಲ ಆದೇಶಗಳು ಮತ್ತು ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳು ಅನುಸರಿಸಬೇಕಾದ ಕೋವಿಡ್-19 ವಿಶೇಷ ಕಣ್ಗಾವಲು ಕ್ರಮಗಳು ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರಲಿವೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಬಕ್ರೀದ್‌: ಸೂಚನೆ

ಬಕ್ರೀದ್ ಹಬ್ಬ ಆಚರಣೆ, ಪ್ರಾಣಿ ವಧೆ ಮತ್ತು ಬಲಿದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಜಿಲ್ಲೆಯ ಮಸೀದಿಗಳ ಸಾಮರ್ಥ್ಯ ಶೇ 50 ರಷ್ಟು ಜನರು ಪ್ರಾರ್ಥನೆಗೆ ಹಾಜರಿರಬಹುದು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT