ಉಪ್ಪಿನಂಗಡಿ: ಬೆಳ್ತಂಗಡಿ ತಾಲ್ಲೂಕು ತಣ್ಣೀರುಪಂತ ಗ್ರಾಮದ ಕುದ್ರಡ್ಕ ಎಂಬಲ್ಲಿ ಒಂದೇ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೆ ವಿಷ ಪೂರಿತ ಹಾವು ಕಡಿದಿದ್ದು, ಸಮಯೋಚಿತ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬುವರ ಮನೆಯಲ್ಲಿ ಶನಿವಾರ ತಡರಾತ್ರಿ ಘಟನೆ ನಡಿದಿದ್ದು, ವಿಜಯ ಅವರ ಪುತ್ರ ದಕ್ಷಿತ್, ಅವರ ಅಕ್ಕನ ಮಕ್ಕಳಾದ ವಿಶ್ಮಿತಾ, ಮತ್ತು ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದರು. ರಾತ್ರಿ 12ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ್ದ ವಿಷಪೂರಿತ ಕನ್ನಡಿ ಹಾವು ಮಕ್ಕಳ ಕೈಗೆ ಹಾವು ಕಚ್ಚಿದೆ. ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ದುಃಸ್ಥಿತಿಯಿಂದ ಆಸ್ಪತ್ರೆ ತಲುಪುವುದು ವಿಳಂಬವಾಗುವ ಸೂಚನೆ ಅರಿತ ಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರಿಂದ ಚಿಕಿತ್ಸೆ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.