ಉಪ್ಪಿನಂಗಡಿ: ಮಳೆಗಾಲ ಹಾಗೂ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹ ರಕ್ಷಕದಳದ ಪ್ರಭಾರ ಸಮಾದೇಷ್ಟ ಅನಿಲ್ ಕುಮಾರ್ ಎಸ್. ಬೂಮರೆಡ್ಡಿ ಅವರ ಆದೇಶದಂತೆ ಗೃಹರಕ್ಷಕ ದಳದ ಕಚೇರಿಯಿಂದ ಉಪ್ಪಿನಂಗಡಿ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡಕ್ಕೆ ರಬ್ಬರ್ ದೋಣಿ, ಲೈಫ್ ಜಾಕೆಟ್ ಸೇರಿದಂತೆ ವಿವಿಧ ರಕ್ಷಣಾ ಉಪಕರಣಗಳನ್ನು ಹಸ್ತಾಂತರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಹಾಯಕ ಆಡಳಿತ ಅಧಿಕಾರಿ ಕವಿತಾ, ಬೋಧಕ ಉಮೇಶ್, ಪ್ರಥಮ ದರ್ಜೆ ಸಹಾಯಕರಾದ ಶ್ಯಾಮಲಾ ಶೆಟ್ಟಿ, ವಿಶ್ವನಾಥ್, ಜಿಲ್ಲಾ ಕಚೇರಿ ಸಿಬ್ಬಂದಿ ಮೆಹಬೂಬ್, ಖತೀಜಮ್ಮ, ಮಂಜುಳಾ ಭಾಗವಹಿಸಿದ್ದರು.

ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಪರವಾಗಿ ಘಟಕಾಧಿಕಾರಿ ರಾಮಣ್ಣ ಆಚಾರ್ಯ, ಸೆಕ್ಷನ್ ಲೀಡರ್ ದಿನೇಶ್ ಬೊಳ್ಳಾರ್, ಸಹಾಯಕ ಸೆಕ್ಷನ್ ಲೀಡರ್ ಜನಾರ್ದನ ಆಚಾರ್ಯ, ವಸಂತ ಉಪಕರಣಗಳನ್ನು ಸ್ವೀಕರಿಸಿದರು.

ಪ್ರವಾಹ, ಇತರ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಈ ಉಪಕರಣಗಳು ತಂಡದ ಕಾರ್ಯಾಚರಣೆಗೆ ನೆರವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-29-11908288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.