ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಂಗಡಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Last Updated 4 ಫೆಬ್ರುವರಿ 2023, 5:22 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸುವಲ್ಲಿ ಸರ್ಕಾರ ವಿಶೇಷ ಆಸಕ್ತಿಯನ್ನು ವಹಿಸಿದ್ದು, ಸರ್ಕಾರಿ ಶಾಲಾ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಲು ಸ್ಮಾರ್ಟ್‌ ಕ್ಲಾಸ್‌ಗಳನ್ನು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒದಗಿಸಲಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಉಪ್ಪಿನಂಗಡಿ ಸರ್ಕಾರಿ ಮಾದರಿ ಶಾಲೆಯಲ್ಲಿ ಉಪ್ಪಿನಂಗಡಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಖಾಸಗಿ ಶಾಲೆಗಳಲ್ಲಿ ಇರುವಂತೆಯೇ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ವ್ಯವಸ್ಥೆಯ ಕಲಿಕಾ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸಲು ಗಮನ ಹರಿಸಲಾಗಿದೆ. ಪುತ್ತೂರು ತಾಲ್ಲೂಕಿನ 111 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಹಾಗೂ 215 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸಲಾಗಿದೆ’ ಎಂದರು.

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ನೀಡುವ ಶಿಕ್ಷಣಗಿಂತ ಇಂತಹ ಕ್ರಿಯಾತ್ಮಕ ಕಾರ್ಯಕ್ರಮಗಳಿಗಳಿಂದ ಮಕ್ಕಳ ಮನಸ್ಸು ಹೆಚ್ಚು ಚೈತನ್ಯ ಶೀಲವಾಗಲಿದೆ ಎಂದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ ಶಾಂತಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ವೇಗಸ್ ಮಾತನಾಡಿದರು.

ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯಕುಮಾರ್ ಕಲ್ಲಳಿಕೆ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಯುನಿಕ್, ಮಾಜಿ ಅಧ್ಯಕ್ಷ ಚಂದ್ರಶೇಖರ, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷೆ ಲಲಿತಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ಸಂತೋಷ್ ನಾಯ್ಕ್, ಹಿರೇಬಂಡಾಡಿ ಪ್ರೌಢಶಾಲಾ ಮುಖ್ಯಶಿಕ್ಷಕಿ ವೇದಾವತಿ, ಜತೀಂದ್ರ ಶೆಟ್ಟಿ, ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಶ್ರೀಧರ ಭಟ್, ನಿವೃತ ಮುಖ್ಯಶಿಕ್ಷಕಿ ದೇವಕಿ ಇದ್ದರು.

ಶಿಕ್ಷಕ ಸಂಯೋಜಕ ಅಶ್ರಫ್ ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ಹನುಮಂತಯ್ಯ ವಂದಿಸಿದರು. ಹರಿಣಾಕ್ಷಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT