ಉಪ್ಪಿನಂಗಡಿ: ತುಳುನಾಡಿನ ಸಂಸ್ಕೃತಿ-ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ವಿಶ್ವದಾದ್ಯಂತ ಪರಿಚಯಿಸಬೇಕು ಎಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್ ಹೇಳಿದರು.

ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಹಮ್ಮಿಕೊಂಡಿರುವ 40ನೇ ವರ್ಷದ ಉಬಾರ್ ಕಂಬಳೋತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಕಂಬಳ ಕೋಣ ಸಾಕುವವರ, ಕಂಬಳ ನೋಡುವವರ ಸಂಖ್ಯೆ ಹೆಚ್ಚಿದಾಗ ಮಾತ್ರ ಕಂಬಳವನ್ನು ಶಾಶ್ವತವಾಗಿ ಉಳಿಸಲು ಸಾಧ್ಯ ಎಂದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅಧ್ಯಕ್ಷತೆ ವಹಿಸಿದ್ದರು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ ಮಾತನಾಡಿದರು.

ಮಹಿಷಮರ್ದಿನಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಪುತ್ತೂರು ಬಂಟರ ಸಂಘದ ಮಾಜಿ ಸಂಚಾಲಕ ದಯಾನಂದ ರೈ ಮನವಳಿಕೆ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ., ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಸುಮಾ ಅಶೋಕ್ ರೈ, ಶೈಲಜಾ ರಾಜೇಶ್, ಪುತ್ತೂರು ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ (ಗ್ರಾಮೀಣ) ಪ್ರಧಾನ ಕಾರ್ಯದರ್ಶಿ ಅನಿ ಮಿನೇಜಸ್, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಡಾ. ರಮ್ಯಾ ರಾಜಾರಾಮ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲ್ಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಕರಾಯ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯವಿಕ್ರಮ ಕಲ್ಲಾಪು, ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ಅಬ್ದುಲ್ ರಹಿಮಾನ್ ಯುನಿಕ್, ಕಂಬಳ ಸಮಿತಿ ಗೌರವಾಧ್ಯಕ್ಷ ಎನ್.ಉಮೇಶ್ ಶೆಣೈ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ಮುರಳೀಧರ ರೈ ಮಠಂತಬೆಟ್ಟು, ವಿದ್ಯಾಧರ ಜೈನ್, ರಾಮಚಂದ್ರ ಮಣಿಯಾಣಿ, ರಾಜೇಶ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾದ ಯೋಗೀಶ್ ಸಾಮಾನಿ ಭಾಗವಹಿಸಿದ್ದರು.

ಕಂಬಳ ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ ವಂದಿಸಿದರು. ಬಾಲಕೃಷ್ಣ ಪೂಜಾರಿ ನಿರೂಪಿಸಿದರು.

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಕಂಬಳದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಂಬಳ ಕೋಣ, ಬ್ಯಾಂಡ್ ವಾದ್ಯ, ಕೊಂಬುಗಳ ನಾದದೊಂದಿಗೆ ಮೆರವಣಿಗೆ ನಡೆಯಿತು. ಗೊಂಬೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-29-2131191172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.