ಉಪ್ಪಿನಂಗಡಿ: ‘ರಾಜಕಾರಣ ಮಾತ್ರ ನಮಗೆ ಮುಖ್ಯವಲ್ಲ. ಅದರೊಂದಿಗೆ ಸಮಾಜಸೇವೆಯ ಗುಣ, ಮಣ್ಣಿನ ಸಂಸ್ಕೃತಿ, ಕ್ರೀಡೆ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ಕೆಲಸವೂ ರಾಜಕಾರಣಿಗಳಿಂದ ಆಗಬೇಕು. ಆ ಕೆಲಸ ಶಾಸಕ ಅಶೋಕ್ ರೈ ಅವರಿಂದ ಆಗುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಹಮ್ಮಿಕೊಂಡಿರುವ ಉಬಾರ್ ಕಂಬಳೋತ್ಸವದ ಸಭಾಕಾರ್ಯಕ್ರಮದಲ್ಲಿ ಶನಿವಾರ ರಾತ್ರಿ ಅವರು ಮಾತನಾಡಿದರು.

ನಟ ಅರವಿಂದ ಬೋಳಾರ್ ಮಾತನಾಡಿ, ಕಂಬಳ ಊರಿನ ದೊಡ್ಡ ಹಬ್ಬವಾಗಿದ್ದು, ಎಲ್ಲರ ಸಹಕಾರದಿಂದ ಮಾತ್ರ ಇದನ್ನು ಉತ್ತಮವಾಗಿ ಆಯೋಜನೆ ಮಾಡಲು ಸಾಧ್ಯ ಎಂದರು.

ಮುಖಂಡರಾದ ವಿನಯಕುಮಾರ್ ಸೊರಕೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ರಕ್ಷಿತ್ ಶಿವರಾಂ, ಉದಯಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಸಿನಿಮ ನಟರಾದ ಆನಂದ ಬೋಳಾರ್, ಸನಿಲ್ ಗುರು, ಪುಷ್ಪರಾಜ್ ಬೊಳ್ಳಾರ್ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮಾಸ್ಟರ್ ಪ್ಲಾನರಿಯ ಎಸ್.ಕೆ.ಆನಂದ್, ಸದಾಶಿವ ಸಾಮಾನಿ ಸಂಪಿಗೆದಡಿ, ಬೆಳ್ಳಿಪ್ಪಾಡಿ ಕೊಡಪೊಟ್ಯ ಸುರೇಶ್ ಕೃಷ್ಣಯ್ಯ, ರಾಷ್ಟ್ರೀಯ ಜೂಯೂನಿಯರ್ ಕಬಡ್ಡಿ ಚಾಂಪಿಯನ್ಷಿಪ್ ಆಟಗಾರ ಆಧೀಶ್ ಶೆಟ್ಟಿ ಬರೆಮೇಲು ಅವರನ್ನು ಅಭಿನಂದಿಸಲಾಯಿತು.

ಪ್ರಮುಖರಾದ ಚಂದ್ರಪ್ಪ, ನವೀನ್ ಭಂಡಾರಿ, ಪ್ರಸಾದ್ ಕೌಶಲ್ ಶೆಟ್ಟಿ, ರವಿ ಶೆಟ್ಟಿ ಮೂಡಂಬೈಲು, ಗುಣಪಾಲ ಕಡಂಬ, ಭರತ್ ಮುಂಡೋಡಿ, ಅಧ್ಯಕ್ಷ ಈಶ್ವರ ಭಟ್, ಯು.ಟಿ.ತೌಸೀಫ್, ಸರ್ವೋತ್ತಮ ಗೌಡ, ಜಯವಿಕ್ರಮ್ ಕಲ್ಲಾಪು, ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ಸುಮಾ ಅಶೋಕ್ ರೈ, ಫೈಝಲ್ ಕಡಬ, ಜೋಕಿಂ ಡಿಸೋಜ, ಉಮೇಶ್ ಶೆಣೈ ಎನ್., ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ವಿದ್ಯಾಧರ ಜೈನ್, ರಾಮಚಂದ್ರ ಮಣಿಯಾಣಿ, ಯೋಗೀಶ್ ಎಸ್. ಸಾಮಾನಿ ಭಾಗವಹಿಸಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅಶೋಕ್ ರೈ, ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಎರಡೂವರೆ ವರ್ಷದಲ್ಲೇ ಲೋಕೋಪಯೋಗಿ ಇಲಾಖೆಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ₹ 248 ಕೋಟಿ ಅನುದಾನ ಬಂದಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-29-1007281667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.