ಮಂಗಳೂರು: ‘ರಾಜ್ಯ ಸರ್ಕಾರ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಕಟ್ಟಡ, ಕುಡಿಯುವ ನೀರು, ಒಳಚರಂಡಿ, ನಗರದ ರಸ್ತೆಗು ಸೇರಿ ದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳಲ್ಲಿ ಸ್ಮಾರ್ಟ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಯೋಜನೆಗಳಿಗೆ ಇದುವರೆಗೆ ₹ 24 ಸಾವಿರ ಕೋಟಿ ಅನುದಾನವನ್ನು ನಗರಾ ಭಿವೃದ್ಧಿ ಇಲಾಖೆ ಮೂಲಕ ಬಿಡುಗಡೆ ಮಾಡಿದೆ’ ಎಂದು ನಗರಾ ಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.

ನಗರಾಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಶ್ರಯದಲ್ಲಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಎರಡನೆ ಹಂತದ ₹ 165 ಕೋಟಿಯ ಕಾಮಗಾರಿಗಳಿಗೆ ಹಾಗೂ ಹಸಿರು ನ್ಯಾಯ ಮಂಡಳಿ (ಎನ್ಜಿಟಿ) ಪರಿಹಾರ ನಿಧಿಯ ₹ 45 ಕೋಟಿಯ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.

‘ಸರ್ಕಾರ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಎರಡನೆ ಹಂತದಲ್ಲಿ ರಾಜ್ಯದ ವಿವಿಧ ಪಾಲಿಕೆಗಳಿಗೆ ₹ 2600 ಕೋಟಿ ಅನುದಾನ ಒದಗಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಗೆ ₹ 200 ಕೋಟಿ ಹಂಚಿಕೆ ಮಾಡಲಾಗಿದೆ. ಜಿಎಸ್ಟಿ ಕಡಿತವಾಗಿ ₹ 165 ಕೋಟಿ ಅನುದಾನ ಕಾಮಗಾರಿಗಳಿಗೆ ಬಳಕೆ ಆಗಲಿದೆ. ಐದು ಪ್ಯಾಕೇಜ್ಗಳಲ್ಲಿ ಒಟ್ಟು 25 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಎನ್ಜಿಸಿ ಪರಿಹಾರ ನಿಧಿಯಡಿ ಮುಳಿಹಿತ್ಲುವಿನಲ್ಲಿ ಒಣ ಕಸ ಸಂಸ್ಕರಣಾ ಕೇಂದ್ರವೂ ಸೇರಿ ಒಟ್ಟು ₹ 45 ಕೋಟಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ರಾಜ್ಯದ ವಿವಿಧ ನಗರಗಳ ಕೆರೆಗಳ ಅಭಿವೃದ್ಧಿಗೆ ಇಲಾಖೆ ₹ 450 ಕೋಟಿ ಅನುದಾನ ಒದಗಿಸಿದ್ದು, ಮಂಗಳೂರಿಗೂ ₹ 18 ಕೋಟಿ ಮಂಜೂರಾಗಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ‘ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಒಳಚರಂಡಿ, ಪಾದಚಾರಿ ಮಾರ್ಗ, ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಸೂಚಿಸಿದರು.

‘ಕಿಯೊನಿಕ್ಸ್ ನೆರವಿನಿಂದ ಇಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ₹ 100 ಕೋಟಿ ಕಾಯ್ದಿರಿಸಲಾಗಿದೆ. ನದಿ ಒತ್ತುವರಿ ತಡೆಯಲು ಸರ್ವೆಗೆ ₹ 1 ಕೋಟಿ ಮೀಸಲಿಟ್ಟಿದ್ದೇವೆ. ನದಿ, ಕರೆ ಒತ್ತುವರಿ ಮುಲಾಜಿಲ್ಲದೇ ತೆರವುಗೊಳಿಸಲಿದ್ದೇವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ನೆಲೆಸಿದ್ದು, ಇದು ನಗರದಲ್ಲಿ ಐ.ಟಿ ಕ್ಷೇತ್ರಕ್ಕೆ ಹೂಡಿಕೆಯನ್ನು ಆಕರ್ಷಿಸುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಿ.ವೇದವ್ಯಾಸ ಕಾಮತ್, ’ದಲಿತರ ಅಭಿವೃದ್ಧಿಗೆ ಶ್ರಮಿಸಿದ್ದ ಕುದ್ಮುಲ್ ರಂಗರಾಯರ ಸಮಾಧಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಮೊದಲ ಹಂತದಲ್ಲಿ ಅನುದಾನ ಬಿಡುಗಡೆಯಾಗಿತ್ತು. ಅದನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ವಿಶ್ವಾಸ್ ದಾಸ್ ಗಾಣಿಗ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಾಂಗ್ರೆಸ್ ಮುಖಂಡರಾದ ಜೆ.ಆರ್.ಲೋಬೊ, ಶಶಿಧರ ಹೆಗ್ಡೆ, ಹರಿನಾಥ್, ಭಾಸ್ಕರ ಮೊಯಿಲಿ, ಅಪ್ಪಿ ಭಾಗವಹಿಸಿದ್ದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-1655340940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.