ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೇನ್ ಬಡಿದು ವ್ಯಕ್ತಿ ಸಾವು: ಸಾವಿನ ಪಾರದರ್ಶಕ ತನಿಖೆಗೆ ಆಗ್ರಹ

Last Updated 24 ಜೂನ್ 2022, 2:16 IST
ಅಕ್ಷರ ಗಾತ್ರ

ಮಂಗಳೂರು: ಕ್ರೇನ್‌ ಬಡಿದ ಪರಿಣಾಮ ಎಂಆರ್‌ಪಿಎಲ್‌ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಎಂಆರ್‌ಪಿಎಲ್‌ ಉದ್ಯೋಗಿ ಕೇಶವ ಕೋಟ್ಯಾನ್‌ (40) ಎಂದು ಗುರುತಿಸಲಾಗಿದೆ. ಕೇಶವ ಕೋಟ್ಯಾನ್‌ ಅವರು ಎಂಆರ್‌ಪಿಎಲ್‌ ಒಳಗೆ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ರೇನ್‌ ಬಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಗ್ರಹ:ಎಂಆರ್‌ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ಕುರಿತು ಪಾರದರ್ಶಕ ತನಿಖೆ ನಡೆಯಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಕರ್ತವ್ಯದ ವೇಳೆ ಕಂಪನಿಯ ನಿರ್ಲಕ್ಷದಿಂದ ಸಾವಿಗೀಡಾದ ಕೇಶವ ಕೋಟ್ಯಾನ್ ಕುಟುಂಬಕ್ಕೆ ₹ 1 ಕೋಟಿ ಪರಿಹಾರ, ಕುಟುಂಬ ಸದಸ್ಯನಿಗೆ ಎಂಆರ್‌ಪಿಎಲ್‌ನಲ್ಲಿ ಕಾಯಂ ಉದ್ಯೋಗ ಒದಗಿಸಿಕೊಡಬೇಕು ಎಂದು ಹೇಳಿಕೆಯಲ್ಲಿ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT