ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿ: ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

Last Updated 6 ಜೂನ್ 2021, 5:17 IST
ಅಕ್ಷರ ಗಾತ್ರ

ಪುತ್ತೂರು: ಈ ಹಿಂದೆ ಆಶಾ ಕಾರ್ಯಕರ್ತೆಯರನ್ನು ಗುರುತಿಸುವವರು ಇರಲಿಲ್ಲ. ಆದರೆ ಕೋವಿಡ್ ಸಂದರ್ಭದಲ್ಲಿ ಇವರ ಸೇವಾ ಕಾರ್ಯವನ್ನು ಸಮಾಜ ಗುರುತಿಸಿದೆ. ಇವರಿಗೆ ನೀಡುವ ಗೌರವಧನವನ್ನು ಸರ್ಕಾರ ಹೆಚ್ಚಿಸಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಇಲ್ಲಿನ ನೆಲ್ಲಿಕಟ್ಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಗರ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ನಗರಸಭಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೆಂದ್ರದ ಕೋವಿಡ್ ವಾರಿಯರ್ಸ್‌ಗೆ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಅವರ ವತಿಯಿಂದ ಮಾಸ್ಕ್ ವಿತರಣೆ ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಮಹಮ್ಮದ್ ಬಡಗನ್ನೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಮಾಜಿ ಅಧ್ಯಕ್ಷ ಮುರಳಿಧರ ರೈ ಮಠಂತಬೆಟ್ಟು, ನಗರಸಭಾ ಸದಸ್ಯರಾದ ಶೈಲಾ ಪೈ, ಮಹಮ್ಮದ್ ರಿಯಾಝ್, ಮಾಜಿ ಸದಸ್ಯ ಮುಖೇಶ್ ಕೆಮ್ಮಿಂಜೆ, ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ತಾಲ್ಲೂಕು ಸಂಚಾಲಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಕಾಂಗ್ರೆಸ್ ಮುಖಂಡರಾದ ಶಿವರಾಮ ಆಳ್ವ, ವಕೀಲೆ ಸಾಹಿರಾ ಝುಬೈರ್, ಪೂರ್ಣೇಶ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT