ಮಂಗಳವಾರ, ಸೆಪ್ಟೆಂಬರ್ 28, 2021
26 °C
ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮನವಿ

ವಾರಾಂತ್ಯ ಕರ್ಫ್ಯೂ ತೆರವಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು: ‘ವಾರಾಂತ್ಯ ಕರ್ಫ್ಯೂ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಬೇಕು. ವಾರಾಂತ್ಯ ಕರ್ಫ್ಯೂ ತೆರವು ಮಾಡದಿದ್ದಲ್ಲಿ ವ್ಯಾಪಾರಸ್ಥರು ಅಂಗಡಿ ತೆರೆಯಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಮುಖರು, ಶಾಸಕ ಸಂಜೀವ ಮಠಂದೂರು ಅವರಿಗೆ ಬುಧವಾರ ಮನವಿ ಸಲ್ಲಿಸಿ, ವಾರಾಂತ್ಯ ಕರ್ಫ್ಯೂವಿನಿಂದ ವರ್ತಕರಿಗೆ ಆಗುತ್ತಿರುವ ತೊಂದರೆಯನ್ನು ವಿವರಿಸಿದ್ದಾರೆ.

ಇಲ್ಲಿನ ಪುರಭವನದಲ್ಲಿ ಬುಧವಾರ ನಡೆಯುತ್ತಿದ್ದ ಕೋವಿಡ್ ಲಸಿಕೆ ಮೇಳ ವೀಕ್ಷಣೆಗೆ ಶಾಸಕರು ಬಂದಿದ್ದ ವೇಳೆ, ಸಂಘದ ಅಧ್ಯಕ್ಷ ಜಾನ್ ಕುಟಿನ್ಹ ನೇತೃತ್ವದಲ್ಲಿ ಪದಾಧಿಕಾರಿಗಳಾದ ವಿಶ್ವಪ್ರಸಾದ್ ಸೇಡಿಯಾಪು, ಕೃಷ್ಣನಾರಾಯಣ ಮುಳಿಯ, ಉಮೇಶ್ ನಾಯಕ್ ಅವರು ಭೇಟಿಯಾಗಿ ಮನವಿ ಮಾಡಿದರು.

ವಾರಾಂತ್ಯ ಕರ್ಫ್ಯೂ ಉದ್ಯಮಕ್ಕೆ ಹೊಡೆತ ಬಿದ್ದಿದೆ. ವ್ಯವಹಾರ ನಡೆಸಲು ಸಾಧ್ಯವಾಗದೆ ವರ್ತಕರು ತೊಂದರೆಗೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ ನೀಡಬೇಕು. ವಾರಾಂತ್ಯ ಕರ್ಫ್ಯೂ ತೆರವು ಮಾಡದಿದ್ದಲ್ಲಿ ಮುಂದಿನ ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಎಲ್ಲ ವರ್ತಕರು ಅಂಗಡಿ ವ್ಯವಹಾರ ಆರಂಭಿಸಿ ವಿರೋಧ ವ್ಯಕ್ತಪಡಿಸುವ ಜತೆಗೆ, ಪ್ರತಿಭಟಿಸಲಿದ್ದಾರೆ ಎಂದು ವರ್ತಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.