ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ವಿಧಾನಸಭಾಧ್ಯಕ್ಷರಾಗಿದ್ದ ಯು.ಟಿ.ಖಾದರ್ ಆ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೂ ಪ್ರಾತಿನಿಧ್ಯ ಸಿಕ್ಕಂತಾಗಿದೆ.

ಯು.ಟಿ.ಫರೀದ್– ನಸೀಮಾ ದಂಪತಿಯ ಪುತ್ರರಾಗಿ 1969ರ ಅ.12ರಂದು ಜನನ. ಅವರ ತಂದೆ ಶಾಸಕರಾಗಿದ್ದರು. ಬಾಲ್ಯದಿಂದಲೇ ರಾಜಕಾರಣದ ನಂಟು. ವಿದ್ಯಾರ್ಥಿ ದೆಸೆಯಲ್ಲೇ ಎನ್ಎಸ್ಯುಐ ಮೂಲಕ ರಾಜಕೀಯ ಚಟುವಟಿಕೆಯಲ್ಲಿ ಭಾಗಿ. ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 2004ರಲ್ಲಿ ನಾಲ್ಕನೇ ಸಲ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿದ್ದ ಅವರ ತಂದೆ ಯು.ಟಿ.ಫರೀದ್ ಅವರು ಅನಾರೋಗ್ಯಕ್ಕೆ ಒಳಗಾದರು. ಆಗೆಲ್ಲ ತಂದೆಗೆ ಹೆಗಲು ಕೊಟ್ಟು ಅವರ ರಾಜಕೀಯ ಜವಾಬ್ದಾರಿ ಗಳನ್ನೆಲ್ಲ ನಿಭಾಯಿಸಿದ್ದು ಯು.ಟಿ.ಖಾದರ್. ಈ ಅವಧಿಯಲ್ಲಿ ರಾಜಕೀಯ ಪಟ್ಟುಗಳನ್ನು ಯು.ಟಿ.ಖಾದರ್ ಕರಗತ ಮಾಡಿಕೊಂಡು ಪೂರ್ಣಪ್ರಮಾಣದ ರಾಜಕಾರಣಿಯಾಗಿ ರೂಪುಗೊಂಡರು.

ತಂದೆ ಯು.ಟಿ.ಫರೀದ್ ಅವರು 2007ರ ಫೆ. 6ರಂದು ನಿಧನರಾಗಿದರು. ಇದರಿಂದ ತೆರವಾದ ಸ್ಥಾನಕ್ಕೆ 2007ರ ಜೂನ್ 2ರಂದು ಉಪಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷವು ಯು.ಟಿ.ಖಾದರ್ ಅವರಿಗೆ ಟಿಕೆಟ್ ನೀಡಿತು. ತೀವ್ರ ಹಣಾಹಣಿಯಿಂದ ಕೂಡಿದ್ದ ಆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಚಂದ್ರಶೇಖರ್ ಉಚ್ಚಿಲ್ ಅಭ್ಯರ್ಥಿ. ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದ ಅವಧಿ ಅದು. ಯು.ಟಿ.ಖಾದರ್ ಅವರು ಚಂದ್ರಶೇಖರ್ ಉಚ್ಚಿಲ್ ಅವರನ್ನು 8,032 ಮತಗಳಿಂದ ಸೋಲಿಸಿ ಮೊದಲ ಸಲ ವಿಧಾನಸಭೆ ಪ್ರವೇಶಿಸಿದರು. 2007ರ ಉಪಚುನಾವಣೆಯ ನಂತರ, 2008, 2013, 2018, 2023 ರಲ್ಲಿ ಸತತವಾಗಿ ಜಯಗಳಿಸುತ್ತಾ ಬಂದಿದ್ದಾರೆ.

ಸಚಿವರಾಗಿ ಸಾಧನೆ: 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯು.ಟಿ.ಖಾದರ್ ಮೊದಲ ಬಾರಿ ಸಚಿವರಾದರು. ಆರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ, ಬೈಕ್ ಆಂಬುಲೆನ್ಸ್ನಂತಹ ಯೋಜನೆಗಳು ಅವರಿಗೆ ಹೆಸರು ತಂದು ಕೊಟ್ಟಿದ್ದವು. 2016ರಿಂದ 2018ರ ಅವಧಿಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸ್ಥಾನ ಅವರಿಗೆ ಒಲಿದಿತ್ತು. 2018ರಲ್ಲಿ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ನಗರಾ ಭಿವೃದ್ಧಿ ಹಾಗೂ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯೂ ಅವರ ಹೆಗಲೇರಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-655076426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.