ಉಳ್ಳಾಲ: ನರಿಂಗಾನವು ಸಾಮರಸ್ಯದ ಗ್ರಾಮವಾಗಿ ರೂಪುಗೊಂಡು ಇದೀಗ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ನಡೆದು ಮಾದರಿಯಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ನರಿಂಗಾನ ಗ್ರಾಮ ಪಂಚಾಯಿತಿ ವಠಾರದಲ್ಲಿ ಗಾಂಧಿ ಪ್ರತಿಮೆ ಅನಾವರಣ, ಗ್ರಾಮ ವ್ಯಾಪ್ತಿಯ ಬೋಳದಲ್ಲಿ ನಿರ್ಮಿಸಲಾದ ಸ್ವಚ್ಛ ಸಂಕೀರ್ಣ ಮತ್ತು ಮಲತ್ಯಾಜ್ಯ ಘಟಕ ಉದ್ಘಾಟನೆ, ಆಶಾ ಕಾರ್ಯಕರ್ತೆಯರಿಗೆ ಸ್ಕೂಟರ್ ಹಸ್ತಾಂತರ, ಹಕ್ಕುಪತ್ರ ವಿತರಣೆ, ನೀರಿನ ಟ್ಯಾಂಕ್ ಉದ್ಘಾಟನೆ, ಅಂಗವಿಕಲರಿಗೆ ಚೆಕ್ ವಿತರಣೆ ಸೇರಿದಂತೆ ನರಿಂಗಾನ ಗ್ರಾಮದಲ್ಲಿ ₹ 5 ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಳ್ಳಾಲ ಕ್ಷೇತ್ರದಲ್ಲಿ ₹ 20 ಕೋಟಿ ಅನುದಾನದಲ್ಲಿ ಸೈಬರ್ ಭದ್ರತೆ ಜಾರಿಗೆ ತರಲು ಯೋಚಿಸಲಾಗಿದ್ದು, ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದು ಜಾರಿಯಾದರೆ ಅಪರಾಧ ಸಹಿತ ಎಲ್ಲ ರೀತಿಯ ಸಮಸ್ಯೆಗಳಿಗೂ ಕಡಿವಾಣ ಹಾಕಲು ಸಾಧ್ಯ. ನರಿಂಗಾನ ಗ್ರಾಮಸ್ಥರಿಗೆ ಈ ಮೊದಲು ನೀಡಿದ ಭರವಸೆಯಂತೆ 24 ಗಂಟೆ ಕುಡಿಯುವ ನೀರು, ರಸ್ತೆ, ಶಿಕ್ಷಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಗ್ರಾಮವು ಅಭಿವೃದ್ಧಿಯ ಹಂತಕ್ಕೆ ತಲುಪಿದೆ ಎಂದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿದರು.

ಪಂಚಾಯಿತಿ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಜ್ಯೋತಿ ಡಿಸೋಜ, ನರಿಂಗಾನ ಲವ ಕುಶ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಪ್ರಮುಖರಾದ ಎ.ಸಿ.ಭಂಡಾರಿ, ರಮೇಶ್ ಶೆಟ್ಟಿ ಬೋಳಿಯಾರ್, ಮಹಮ್ಮದ್ ಮೋನು ಮಲಾರ್, ಶೀನ ಶೆಟ್ಟಿ, ಬೋಳ ಸೇಂಟ್ ಲಾರೆನ್ಸ್ ಚರ್ಚ್ ಧರ್ಮಗುರು ಪೀಟರ್ ಡಿಸೋಜ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ವೀರೇಂದ್ರ, ಬಂಟ್ವಾಳ ಉಪವಿಭಾಗ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಾರಾನಾಥ ಸಾಲಿಯನ್ ಪಿ., ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಜನಿ ಭಾಗವಹಿಸಿದ್ದರು.

ಪಿಡಿಒ ಶ್ವೇತಾ ಕೆ.ವಿ. ಸ್ವಾಗತಿಸಿದರು. ಕಾರ್ಯದರ್ಶಿ ಎ.ಕೆ.ನಳಿನಿ ಸನ್ಮಾನಪತ್ರ ವಾಚಿಸಿ, ವಂದಿಸಿದರು. ಸತೀಶ್ ಕುಮಾರ್ ಪುಂಡಿಕಾಯಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.