ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಕೇರಳ ಯಾತ್ರೆಯ ವೇಳೆ ರಾಜ್ಯದಲ್ಲಿ ಹಿಂಸಾಚಾರ: ವಿ.ಡಿ.ಸತೀಶನ್

Published 11 ಡಿಸೆಂಬರ್ 2023, 13:41 IST
Last Updated 11 ಡಿಸೆಂಬರ್ 2023, 13:41 IST
ಅಕ್ಷರ ಗಾತ್ರ

ಕಾಸರಗೋಡು: ನವಕೇರಳ ಯಾತ್ರೆಯ ವೇಳೆ ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರ ನಡೆಸಲಾಗುತ್ತಿದೆ ಎಂದು ವಿರೋಧ ಪಕ್ಷದ ಮುಖಂಡ ವಿ.ಡಿ.ಸತೀಶನ್ ಆರೋಪಿಸಿದರು.

‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವ್ಯವಸ್ಥಿತವಾಗಿ ಹಿಂಸಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ. ರಾಜ್ಯದ ಪೊಲೀಸ್ ಸಿಬ್ಬಂದಿಯ ಮೇಲೆ ವಿಶ್ವಾಸವಿಲ್ಲದೆ, ಪಕ್ಷದ ಬೆಂಬಲಿಗರಾದ ಕಿಡಿಗೇಡಿಗಳನ್ನು ಈ ಕೆಲಸಕ್ಕೆ ಅವರು ಅಣಿಗೊಳಿಸಿದ್ದಾರೆ’ ಎಂದು ಅವರು ಜಿಲ್ಲಾ ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಟೀಕಿಸಿದರು.

ನವಕೇರಳ ಯಾತ್ರೆಯ ವೇಳೆ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆಗಳಾಗುತ್ತಿದ್ದು, ಶಾಸಕರ ಸಹಿತ ಜನಪ್ರತಿನಿಧಿಗಳ ಮೇಲೂ ಆಕ್ರಮಣ ನಡೆದಿದೆ. ಇದನ್ನು ಕಂಡು ಮುಖ್ಯಮಂತ್ರಿ ಸಂತೋಷ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT