ಬುಧವಾರ, ಮಾರ್ಚ್ 29, 2023
24 °C

ಮಹರ್ಷಿ ವಾಲ್ಮೀಕಿ ಆದರ್ಶ ಪಾಲನೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ತಿಳಿದುಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನೆಡೆಯಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಯಾವ ಸೌಲಭ್ಯಗಳು ಕೂಡ ಇಲ್ಲದ ಕಾಲದಲ್ಲಿ ದೇಶದ ಒಂದೊಂದು ಪ್ರದೇಶಗಳ ಅಸ್ತಿತ್ವದ ಬಗ್ಗೆ ತಿಳಿದುಕೊಂಡು ಕಾವ್ಯದಲ್ಲಿ ವಾಲ್ಮೀಕಿ ಪ್ರತಿಬಿಂಬಿಸಿದ್ದಾರೆ. ರಾಮಾಯಣದಲ್ಲಿ ಬಳಕೆಯಾಗಿರುವ ಪುಷ್ಪಕ ವಿಮಾನದ ಕಲ್ಪನೆ ಆಧುನಿಕ ಯಂತ್ರಗಳ ಬಗ್ಗೆ ಅವರಿಗಿದ್ದ ದಿವ್ಯ ದೃಷ್ಟಿಗೆ ಉದಾಹರಣೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮಾತನಾಡಿ, ಭಾರತೀಯ ಸಂಸ್ಕೃತಿಯ ಸತ್ವವನ್ನು ಜಗತ್ತಿಗೆ ಸಾರಿದ ಮೇರು ಕೃತಿ ರಾಮಾಯಣ. ಅದನ್ನು ರಚಿಸಿದ ಕೀರ್ತಿ ವಾಲ್ಮೀಕಿ ಅವರಿಗೆ ಸಂದಿದೆ. ಎಷ್ಟೇ ಕೆಟ್ಟವನಾದರೂ ವ್ಯಕ್ತಿಗೆ ಸುಧಾರಣೆಯಾಗುವ ಅವಕಾಶವಿದೆ ಎಂದು ಅವರು ತೋರಿಸಿಕೊಟ್ಟಿದಾರೆ ಎಂದರು.

ವಿದ್ಯಾರ್ಥಿಗಳಿಗೆ ಸನ್ಮಾನ:

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ  ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸರಳ ವಿವಾಹ ಯೋಜನೆಯಡಿ ಮದುವೆಯಾದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ವಾಲ್ಮಿಕಿ ಅಭಿವೃದ್ಧಿ ನಿಗಮದಿಂದ ನಾಲ್ವರು ಫಲಾನುಭವಿಗಳಿಗೆ ಆಟೊರಿಕ್ಷಾ ವಿತರಿಸಲಾಯಿತು. 

ಮೇಯರ್ ಜಯಾನಂದ ಅಂಚನ್ ಮುಖ್ಯ ಅತಿಥಿಯಾಗಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅಂಶು ಕುಮಾರ್ ಇದ್ದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ರಶ್ಮಿ ಎಸ್.ಆರ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಮನಿಷ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು