ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಆರೋಗ್ಯಕ್ಕೆ ವಿಶೇಷ ಕಾಳಜಿ

ಕಿನ್ನಿಗೋಳಿ: ಲಸಿಕೆ ಕಾರ್ಯಕ್ರಮ ಉದ್ಘಾಟಿಸಿದ ಉಮಾನಾಥ ಕೋಟ್ಯಾನ್
Last Updated 1 ಜುಲೈ 2021, 4:31 IST
ಅಕ್ಷರ ಗಾತ್ರ

ಮೂಲ್ಕಿ: ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ ಪರಿಣಾಮವಾಗಿ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ. ಶೈಕ್ಷಣಿಕ ಜೀವನಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ತಜ್ಞರಿಂದ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯಾರಂಭಿಸಲಿವೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಕಿನ್ನಿಗೋಳಿಯ ಪಾಂಪೈ ಕಾಲೇಜಿನಲ್ಲಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ ಹಾಗೂ ಯೂತ್ ರೆಡ್‌ಕ್ರಾಸ್ ಸಹಕಾರದೊಂದಿಗೆ ಬುಧವಾರ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಕೆ.ವಿ, ರಾಜೇಶ್ ಶೆಟ್ಟಿ, ಡಾ.ಭಾಸ್ಕರ್ ಕೋಟ್ಯಾನ್, ರೋಟರಿ ಕ್ಲಬ್ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಮ್ಯಾಕ್ಸಿಮ್ ಪಿಂಟೋ, ಪದ್ಮಿನಿ ವಸಂತ, ಸುನಿಲ್ ಜಾರ್ಜ್, ಯಾದವ ದೇವಾಡಿಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹಿಮಕರ್ ಕದಿಕೆ ಇದ್ದರು.

ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿತ್ರಾ ನೇತೃತ್ವದಲ್ಲಿ ಒಟ್ಟು 248 ಮಂದಿಗೆ ಲಸಿಕೆ ನೀಡಲಾಯಿತು. ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿನೋದಕುಮಾರ್ ಬೊಳ್ಳೂರು, ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT