ಗುರುವಾರ , ಸೆಪ್ಟೆಂಬರ್ 23, 2021
24 °C

ದಕ್ಷಿಣ ಕನ್ನಡ: ಕೋವಿಡ್‌ ಲಸಿಕೆ ಶಿಬಿರ ಆ.2ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಡೆ ಲಸಿಕೆ ಶಿಬಿರ ನಡೆಯಲಿದೆ. 40 ಸಾವಿರಕ್ಕೂ ಹೆಚ್ಚು ಲಸಿಕೆ ನೀಡುವ ಗುರಿ ಹೊಂದಲಾಗಿದೆ.

18 ವರ್ಷ ವಯಸ್ಸಿಗೂ ಮೇಲಿನವರಿಗೆ ಕೋವಿಶೀಲ್ಡ್ ಮೊದಲನೇ ಡೋಸ್, 45 ವರ್ಷ ಮೇಲಿನವರಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ ನೀಡಲಾಗುವುದು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶೇ 50 ಆನ್‌ಲೈನ್ ನೋಂದಣಿ ಹಾಗೂ ಶೇ 50 ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳುವ ಮೂಲಕ ಶಿಬಿರ ನಡೆಯಲಿದೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮಾತ್ರ ಲಭ್ಯವಿರುತ್ತದೆ. ಉದ್ಯೋಗ, ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವವರಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ 100 ಮಂದಿಗೆ ಮಾತ್ರ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.