ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಳಚ್ಚಿಲ್‌: ದನದ ಮಾಂಶ ವಶ–ಮೂವರ ಬಂಧನ

Published 29 ಮಾರ್ಚ್ 2024, 5:52 IST
Last Updated 29 ಮಾರ್ಚ್ 2024, 5:52 IST
ಅಕ್ಷರ ಗಾತ್ರ

ಮಂಗಳೂರು: ನಗರದ ವಳಚ್ಚಿಲ್‌ನ ಮನೆಯೊಂದರ ಶೆಡ್‌ನಲ್ಲಿದ್ದ ದನದ 180 ಕೆ.ಜಿ ಮಾಂಸವನ್ನು ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಮನೆಯ ಮಾಲೀಕ ವಳಚ್ಚಿಲ್‌ನ ಖಾದರ್ ಮಹಮ್ಮದ್ ಮೋನು (32), ಮಾರಿಪಳ್ಳ ನಿವಾಸಿ ಇಸ್ಮಾಯಿಲ್ (27), ಅಡ್ಯಾ‌ರ್ ಪದವು ನಿವಾಸಿ ಮಹಮ್ಮದ್ ಶಮೀರ್ (18) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ವಳಚ್ಚಿಲ್‌ನಲ್ಲಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿರುವ ಮಾಹಿತಿ ಆಧಾರದಲ್ಲಿ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಶಿವಕುಮಾರ್, ಅರುಣ್ ಕುಮಾ‌ರ್, ಪಿಎಸ್‌ಐ ರಾಮ ನಾಯ್ಕ ಹಾಗೂ ಸಿಬಂದಿ ದಾಳಿ ನಡೆಸಿದ್ದರು. ಸ್ಥಳದಲ್ಲಿ ದನದ ಮಾಂಸ ಪತ್ತೆಯಾಗಿದ್ದು, ಆರೋಪಿಗಳ ವಿರುದ್ಧ 2020ರ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ‘ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT