ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮರಾಜ್ಯದ ಕಲ್ಪನೆ ನೀಡಿದವರು ವಾಲ್ಮೀಕಿ: ನಳಿನ್‌ಕುಮಾರ್ ಕಟೀಲ್

Published 29 ಅಕ್ಟೋಬರ್ 2023, 5:06 IST
Last Updated 29 ಅಕ್ಟೋಬರ್ 2023, 5:06 IST
ಅಕ್ಷರ ಗಾತ್ರ

ಮಂಗಳೂರು: ದೇಶಕ್ಕೆ ಮೊದಲು ರಾಮರಾಜ್ಯದ ಕಲ್ಪನೆ ನೀಡಿದವರು ವಾಲ್ಮೀಕಿ. ಗ್ರಾಮೋತ್ಥಾನದ ಮೂಲಕ ರಾಮೋತ್ಥಾನ ಆಗುತ್ತದೆ. ಜಗತ್ತಿನಲ್ಲಿ ಪ್ರತಿಯೊಬ್ಬನಿಗೂ ಬದುಕುವ ಹಕ್ಕಿದ್ದು, ಎಲ್ಲರೂ ಸಮಾನರು ಎಂಬುದನ್ನು ಸಾರಿದವರು ಅವರು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶನಿವಾರ ಇಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿದರು. ತಮ್ಮ ಚಿಂತನೆಯಿಂದ ಶ್ರೇಷ್ಠರಾದ ವಾಲ್ಮೀಕಿ, ರಾಮಾಯಣದ ಮೂಲಕ ಜಗತ್ತಿಗೆ ಬೆಳಕು ನೀಡಿದ ಮಹಾನ್ ಸಂತ. ಇಂದಿನ ಸಮಾಜದಲ್ಲಿ ವಾಲ್ಮೀಕಿ ಆದರ್ಶ ಪಾಲನೆ ಅಗತ್ಯವಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್‌ ಮಾತನಾಡಿ, ಸಾಧಾರಣ ವ್ಯಕ್ತಿ ಕೂಡ ಸಾಧನೆ ಮಾಡಲು ಸಾಧ್ಯ ಎಂಬುದನ್ನು ವಾಲ್ಮೀಕಿ ತೋರಿಸಿ ಕೊಟ್ಟಿದ್ದಾರೆ ಎಂದರು.

2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮೇಯರ್ ಸುಧೀರ್ ಕುಮಾರ್ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಮೀನುಗಾರಿಕಾ ಕಾಲೇಜಿನ ಡೀನ್ ಪ್ರೊ ಆಂಜನೇಯಪ್ಪ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಶ್ರೀನಾಥ್, ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಸಿದ್ಧಾರ್ಥ್ ಗೋಯಲ್ ಇದ್ದರು. ಯೋಜನಾಧಿಕಾರಿ ಶಿವಕುಮಾರ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT