ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚಾರ ಇಂದಿನಿಂದ

Published 30 ಡಿಸೆಂಬರ್ 2023, 7:23 IST
Last Updated 30 ಡಿಸೆಂಬರ್ 2023, 7:23 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿರುವ ಪ್ರಯುಕ್ತ ಸಂಸದ ನಳಿನ್‌ಕುಮಾರ್ ಕಟೀಲ್ ಶುಕ್ರವಾರ ಸಿದ್ಧತೆ ಪರಿಶೀಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವರು. ಉದ್ಘಾಟನೆಯ ನಂತರ ರೈಲು 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮಧ್ಯಾಹ್ನ 12.25 ಉಡುಪಿ, ಮಧ್ಯಾಹ್ನ 2.52 ಕಾರವಾರ, ಸಂಜೆ 4.40ಕ್ಕೆ ಮಡಗಾಂವ್ ತಲುಪಲಿದೆ. ಡಿ.31ರಿಂದ ಗುರುವಾರ ಹೊರತುಪಡಿಸಿಪ್ರತಿನಿತ್ಯ ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ನಳಿನ್‌ ಹೇಳಿದರು.

ತಿರುವನಂತಪುರ-ಕಾಸರಗೋಡು ವಂದೇ ಭಾರತ್‌ ರೈಲನ್ನು ಮಂಗಳೂರಿಗೆ ವಿಸ್ತರಣೆ ಅಥವಾ ಕೊಚ್ಚಿ-ಮಂಗಳೂರು ವಂದೇ ಭಾರತ್ ರೈಲಿಗೆ ಮನವಿ ಸಲ್ಲಿಸಲಾಗಿದೆ. ಮಂಗಳೂರು-ಬೆಂಗಳೂರು ನಡುವೆ ಮಾರ್ಚ್‌ ನಂತರ ವಂದೇ ಭಾರತ್‌ ರೈಲು ಸಂಚಾರ ಸಾಧ್ಯವಾಗಬಹುದು. ಸುಬ್ರಹ್ಮಣ್ಯ ಮಾರ್ಗದಲ್ಲಿ ರೈಲು ಹಳಿ ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದ್ದು, ಸಕಲೇಶಪುರದವರೆಗೆ ಮಾರ್ಚ್‌ ವೇಳೆಗೆ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದರು.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ₹350 ಕೋಟಿ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದರು.

ಶಾಸಕ ವೇದವ್ಯಾಸ್‌ ಕಾಮತ್‌, ಮಂಡಲ ಬಿಜೆಪಿ ಅಧ್ಯಕ್ಷ ನಗರ ಘಟಕದ ವಿಜಯ ಕುಮಾರ್‌ ಶೆಟ್ಟಿ, ರೈಲ್ವೆ ಪಾಲಕ್ಕಾಡ್‌ ವಿಭಾಗೀಯ ಅಧಿಕಾರಿ ಅರುಣ್‌ ಚತುರ್ವೇದಿ, ಎಡಿಆರ್‌ಎಂ ಜಯಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT