ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Published 26 ಆಗಸ್ಟ್ 2023, 10:27 IST
Last Updated 26 ಆಗಸ್ಟ್ 2023, 10:27 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯನ್ನು ಶುಕ್ರವಾರ ಆಚರಿಸಲಾಯಿತು.

ದೇವಸ್ಥಾನದ ಚಂದ್ರಮೌಳೇಶ್ವರ ಗುಡಿಯಲ್ಲಿ ಪುರೋಹಿತ ಪ್ರಸನ್ನ ಹೊಳ್ಳ ಅವರ ನೇತೃತ್ವದಲ್ಲಿ ಪೂಜೆ ನಡೆಯಿತು.

ಆರಂಭದಲ್ಲಿ ಮಹಿಳೆಯರು ಕಲಶದೊಂದಿಗೆ ದರ್ಪಣತೀರ್ಥ ನದಿಗೆ ತೆರಳಿದರು. ಅಲ್ಲಿ ಯಮುನೆಗೆ ಪೂಜೆ ನೆರವೇರಿತು. ನಂತರ ಮಂಗಳವಾದ್ಯ, ಕಲಶ ಮೆರವಣಿಗೆಯಲ್ಲಿ ಯಮುನೆಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದರು. ಮಠದಲ್ಲಿ ಯಮುನೆಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ವಿವಿಧ ವೈದಿಕ ವಿಧಿವಿಧಾನಗಳ ಮೂಲಕ ಪೂಜೆ ನೆರವೇರಿತು. ನಂತರ ಪ್ರಸಾದ ವಿತರಿಸಲಾಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್, ದೇವಳದ ಅಧಿಕ್ಷಕ ಪದ್ಮನಾಭ ಶೆಟ್ಟಿಗಾರ್, ಎಂಜಿನಿಯರ್ ಉದಯ ಕುಮಾರ್, ರಾಜಲಕ್ಷ್ಮೀ ಶೆಟ್ಟಿಗಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT