ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸಂತ ಬಂಗೇರ ಅಂತ್ಯಕ್ರಿಯೆ: ಪುತ್ರಿಯಿಂದ ಅಗ್ನಿಸ್ಪರ್ಶ

Published 10 ಮೇ 2024, 0:27 IST
Last Updated 10 ಮೇ 2024, 0:27 IST
ಅಕ್ಷರ ಗಾತ್ರ

ಬೆಳ್ತಂಗಡಿ (ದಕ್ಷಿಣ ಕನ್ನಡ): ಬುಧವಾರ ನಿಧನರಾಗಿದ್ದ ಇಲ್ಲಿನ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಕುವೆಟ್ಟು ಗ್ರಾಮದ ಕೇದೆ ಮನೆತನದ ಜಾಗದಲ್ಲಿ ಗುರುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.  

ವಸಂತ ಬಂಗೇರ ಅವರ ಕಿರಿಯ ಮಗಳು ಬಿನುತಾ ಬಂಗೇರ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮುನ್ನ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಈ ಮೂರೂ ಪಕ್ಷಗಳಿಂದ ಶಾಸಕರಾಗಿ, ಎಲ್ಲಾ ಪಕ್ಷಗಳಲ್ಲೂ ಅಭಿಮಾನಿಗಳನ್ನು ಹೊಂದಿದ್ದ ಅವರ ಅಂತಿಮ ದರ್ಶನ ಪಡೆಯಲು ಭಾರಿ ಜನಸ್ತೋಮ ಸೇರಿತ್ತು.

ಬೆಂಗಳೂರಿನಿಂದ ಅವರ ಪಾರ್ಥಿವ ಶರೀರವನ್ನು ಗುರುವಾರ ಮುಂಜಾನೆ ಊರಿಗೆ ತರಲಾಯಿತು. ಅವರ ಅಭಿಮಾನಿಗಳು ತಾಲ್ಲೂಕಿನ ಗಡಿಭಾಗವಾದ ಚಾರ್ಮಾಡಿಗೆ ತೆರಳಿ, ಪಾರ್ಥಿವ ಶರೀರವನ್ನು ಮನೆಯವರೆಗೂ ಮೆರವಣಿಗೆಯಲ್ಲಿ ತಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT