ಬಂಟ್ವಾಳ: ಮಹಿಳೆಯೊಬ್ಬರು ಸ್ನಾನ ಮಾಡುವ ದೃಶ್ಯವನ್ನು ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಕದ್ದುಮುಚ್ಚಿ ವಿಡಿಯೊ ಚಿತ್ರೀಕರಣ ಮಾಡಿದ ಬಗ್ಗೆ ಇಲ್ಲಿನ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಬಚ್ಚಲುಮನೆಯಲ್ಲಿ ಸೋಮವಾರ ರಾತ್ರಿ ಸ್ನಾನ ಮಾಡುತ್ತಿದ್ದೆ. ಆಗ ಹೊರಗಡೆಯಲ್ಲಿ ನಿಂತಿದ್ದ ಅಪರಿಚಿತ ವ್ಯಕ್ತಿಯೊಬ್ಬ ಗೋಡೆಯ ಸಂಧಿಯಲ್ಲಿ ತನ್ನ ಮೊಬೈಲಿನಲ್ಲಿ ಈ ದೃಶ್ಯವನ್ನು ಸೆರೆ ಹಿಡಿಯುತ್ತಿದ್ದ. ಇದನ್ನು ಗಮನಿಸಿ ನಾನು ಬೊಬ್ಬೆ ಹೊಡೆದಾಗ ಆತ ಅಲ್ಲಿಂದ ಓಡಿಹೋದ. ಬೊಬ್ಬೆ ಕೇಳಿ ನನ್ನ ತಾಯಿ ಹಾಗೂ ಅಕ್ಕಪಕ್ಕದ ಮನೆಯವರು ಬಂದು ಆತನಿಗಾಗಿ ಹುಡುಕಿದರೂ ಸಿಗಲಿಲ್ಲ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.