ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರೇಂದ್ರ ಹೆಗ್ಗಡೆ ಜನ್ಮದಿನ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯಿಂದ ಶುಭ ಹಾರೈಕೆ

Last Updated 26 ನವೆಂಬರ್ 2021, 1:33 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 74ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.

ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಹೆಗ್ಗಡೆ ದಂಪತಿಗೆ ವಿಶೇಷ ಪ್ರಸಾದ ನೀಡಿ ಶುಭ ಹಾರೈಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಟ್ನಶೆಟ್ಟಿ ಸುದೇಶ್ ಕುಮಾರ್ ಜೈನ್, ಬಸದಿಗಳ ಆಡಳಿತ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್ ಇದ್ದರು. ಬ್ಯಾಂಕ್ ಆಫ್ ಬರೋಡದ ಪ್ರಾದೇಶಿಕ ಪ್ರಬಂಧಕ ದೇವಿಪ್ರಸಾದ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್. ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ, ರೋಟರಿ ಕ್ಲಬ್ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ ಶುಭಾಶಯ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT