ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾವೂರು ಕೈಕಂಬ ಸೇತುವೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

Published 1 ಜುಲೈ 2024, 14:16 IST
Last Updated 1 ಜುಲೈ 2024, 14:16 IST
ಅಕ್ಷರ ಗಾತ್ರ

ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಶಿಥಿಲಗೊಂಡಿದ್ದು, ನಾವೂರು ಗ್ರಾಮ ಪಂಚಾಯಿತಿ ಇದೀಗ ಈ ಸೇತುವೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿದೆ.

ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019ರ ಪ್ರಕೃತಿ ವಿಕೋಪದ ಸಂದರ್ಭ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ.

ಕಳೆದ ಚುನಾವಣೆ ಸಂದರ್ಭ ಈ ಪ್ರದೇಶದ ನಾಗರಿಕರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಆಗ ಆ ಪ್ರದೇಶಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ, ನಾವೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ನಾವೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಜುಲೈ 8ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಜನರ ಆಕ್ರೋಶವನ್ನು ಶಮನಗೊಳಿಸಲು ಭಾರಿ ವಾಹನ ವಾಹನ ಸಂಚಾರವನ್ನು ನಿಷೇಧಿಸಿ ಫಕಲ ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೇತುವೆಯ ಎರಡೂ ಬದಿ ದುರ್ಬಲಗೊಂಡಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು ಸಂಚರಿಸುವಾಗ ಎಚ್ಚರವಾಗಿರಬೇಕು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT