ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವೆನ್‍ಲಾಕ್ ಆಸ್ಪತ್ರೆಗೆ ವೆಂಟಿಲೇಟರ್‌ ಕೊಡುಗೆ

ಸ್ಮಾರ್ಟ್‌ ಸಿಟಿ ಮೂಲಕ ವೆನ್‌ಲಾಕ್, ಲೇಡಿಗೋಶನ್ ಅಭಿವೃದ್ಧಿ
Last Updated 30 ಜೂನ್ 2020, 9:42 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್–19 ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಉದ್ಯಮಗಳು ಕೊಡುಗೆ ನೀಡಿದ ವೆಂಟಿಲೇಟರ್‌ಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವೆನ್‌ಲಾಕ್ ಕೋವಿಡ್ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.

ಎಂ.ಆರ್.ಪಿ.ಎಲ್–5, ಎಂ.ಸಿ.ಎಫ್ – 2, ಎನ್.ಎಂ.ಪಿ.ಟಿ– 3 ಹಾಗೂ ಕೆಐಒಸಿಎಲ್ –2 ವೆಂಟಿಲೇಟರ್‌ಗಳನ್ನು ನೀಡಿದ್ದು, ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಸ್ತಾಂತರಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್‌ ಮಾತನಾಡಿ, ‘ವೆನ್‍ಲಾಕ್ ಆಸ್ಪತ್ರೆಗೆ ಸುಮಾರು 60 ವೆಂಟಿಲೇಟರ್‌ಗಳ ಅಗತ್ಯವಿದ್ದು, ಲೋಕಸಭಾ ಸದಸ್ಯರ ಪ್ರಧೇಶಾಭಿವೃದ್ಧಿ ನಿಧಿಯಿಂದ ₹1 ಕೋಟಿ ನೀಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಶಾಸಕರ ನಿಧಿಯಿಂದ 2 ಹಾಗೂ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರು ತಲಾ 2 ವೆಂಟಿಲೇಟರ್‌ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಇದರಿಂದ ಒಟ್ಟಾರೆ 30 ವೆಂಟಿಲೇಟರ್‌ಗಳು ದೊರಕಿದಂತಾಗಿದೆ’ ಎಂದರು.

ಮೇಯರ್ ದಿವಾಕರ್, ಉಪಮೇಯರ್ ವೇದಾವತಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಇದ್ದರು.

ಸ್ಮಾರ್ಟ್ ಸಿಟಿ: ವೆನ್‌ಲಾಕ್, ಲೇಡಿಗೋಶನ್‌ ಅಭಿವೃದ್ಧಿ

ಮಂಗಳೂರು ಸ್ಮಾರ್ಟ್‌ಸಿಟಿ ಅನುದಾನದಲ್ಲಿ ಜಿಲ್ಲಾ ಸರ್ಕಾರಿ ವೆನ್‍ಲಾಕ್ ಹಾಗೂ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದ ಸಚಿವರು,
‘ಸ್ಮಾರ್ಟ್‍ಸಿಟಿ ಮೂಲಕ ಮಂಗಳೂರು ನಗರದಲ್ಲಿ ಸುಮಾರು ₹1ಸಾವಿರ ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ’ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ಸ್ಮಾರ್ಟ್‌ ಸಿಟಿಯಿಂದ ವೆನ್‍ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿ ₹50 ಕೋಟಿಗೂ ಅಧಿಕ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT