ಭಾನುವಾರ, ಏಪ್ರಿಲ್ 5, 2020
19 °C

ವೇಣೂರಿನ ಬಾಹುಬಲಿ ಮೂರ್ತಿಗೆ ಇದೇ 8ರಂದು ರಜತ ಲಾಲಕಿ ಸಮರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ವೇಣೂರಿನ ಬಾಹುಬಲಿ ಬೆಟ್ಟದ ಪ್ರಾಂಗಣದಲ್ಲಿ ಇದೇ 8ರಂದು ಸಂಜೆ ಗಂಟೆ 5.30ಕ್ಕೆ ನೂತನ ರಜತ ಲಾಲಕಿ ಸಮರ್ಪಣೆ ಸಮಾರಂಭ ನಡೆಯಲಿದೆ.

ಅಳದಂಗಡಿ ಅರಮನೆ ಡಾ. ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಭಾರತೀಯ ಜೈನ್ ಮಿಲನ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಮುನಿರಾಜ ರೆಂಜಾಳ ಶುಭಾಶಂಸನೆ ಮಾಡುವರು.

ರಥಯಾತ್ರೆ: ವೇಣೂರು ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಇದೇ 6 ರಿಂದ 9ರ ವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)