ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.18ರಿಂದ ವೇಣೂರು ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Last Updated 28 ಜನವರಿ 2023, 12:28 IST
ಅಕ್ಷರ ಗಾತ್ರ

ಬೆಳ್ತಂಗಡಿ: ಅಜಿಲ ಸೀಮೆಗೆ ಒಳಪಟ್ಟ ಇತಿಹಾಸ ಪ್ರಸಿದ್ಧ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.18ರಿಂದ 27ರವರೆಗೆ ಜರುಗಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಶನಿವಾರ ಚಪ್ಪರ ಮುಹೂರ್ತ ನಡೆಯಿತು.

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ ಅಜಿಲರು ಮುಹೂರ್ತ ನೆರವೇರಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಎನ್. ಪುರುಷೋತ್ತಮ ರಾವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ, ಸೋಮಯ್ಯ ಮೂಲ್ಯ ಹನೈನಡೆ, ಪ್ರಧಾನ ಕಾರ್ಯದರ್ಶಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ತಾಂತ್ರಿಕ ಸಮಿತಿಯ ಸಂಚಾಲಕ ಯಜ್ಞನಾರಾಯಣ ಭಟ್ ಹಾಗೂ ವಿವಿಧ ಸಮಿತಿ, ಪದಾಧಿಕಾರಿಗಳು, ಸದಸ್ಯರು ಇದ್ದರು.

ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯರು ಪೂಜಾ ವಿಧಿ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT