‘ಧರ್ಮಸ್ಥಳ ಅಪಪ್ರಚಾರ ನಿಲ್ಲಲಿ’
‘ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಿಂದ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂಬ ವಿಶ್ವಾಸವಿದೆ. ಆದರೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ನಿಲ್ಲಬೇಕು. ಧಾರ್ಮಿಕ ಕೇಂದ್ರಕ್ಕೆ ಧಕ್ಕೆ ಆದಾಗ ವಿಎಚ್‌ಪಿ ಕ್ರಮ ವಹಿಸುತ್ತದೆ. ಈ ವಿಚಾರದಲ್ಲಿ ಇಡೀ ರಾಜ್ಯದ ಭಕ್ತರು ಎದ್ದೇಳಬೇಕು. ಭಕ್ತರು ಈಗಾಗಲೇ ರಸ್ತೆಗೆ ಇಳಿದಿದ್ದಾರೆ’ ಎಂದು ಶರಣ್ ಪಂಪ್‌ವೆಲ್ ತಿಳಿಸಿದರು.