ಶುಕ್ರವಾರ, ಜುಲೈ 1, 2022
23 °C

ಅನ್ಯ ಧರ್ಮದವರಿಗೆ ತಸ್ತೀಕ್‌ ಹಣ ಬೇಡ: ವಿಎಚ್‌ಪಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ಯೆ ನೀಡಲು ಆದೇಶಿಸಿದನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್, ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿರೋಧಿಸುವುದಾಗಿ ತಿಳಿಸಿದೆ.

ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು. ಮಸೀದಿ, ಮದರಸಗಳಿಗೆ ಉಪಯೋಗಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮುಖಂಡರು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿತು.

ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ನೀಡಿದ್ದರು. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ್ ಕುತ್ತಾರ್, ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಇದ್ದರು.

ವಕ್ಫ್‌ ಇಲಾಖೆಯಿಂದ ನೀಡಲಿ

ಮಸೀದಿ ಮತ್ತು ಮದರಸಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಅನುದಾನ ನೀಡುವುದು ಬೇಡ. ಬದಲಾಗಿ ವಕ್ಫ್ ಇಲಾಖೆಯಿಂದಲೇ ಮಸೀದಿ, ಮದರಸಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ದೇವಸ್ಥಾನ, ದೈವಸ್ಥಾನದ ಹಣವನ್ನು ಮಸೀದಿ, ಮದ್ರಸಗಳಿಗೆ ನೀಡಬಾರದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ವಕ್ಫ್ ಬೋರ್ಡ್‌ನಿಂದ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿರುವ ವರದಿಯನ್ನು ಸದನದಲ್ಲಿ ಮಂಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಎಂದೂ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.