ಉಜಿರೆ: ಮಹಾವಿಷ್ಣುವಿನ ಶಂಖ, ಚಕ್ರ ಮುದ್ರೆಗಳನ್ನು ಸುದರ್ಶನ ಹವನದಲ್ಲಿ ಕಾಯಿಸಿ ತೋಳುಗಳಿಗೆ ಚಿಹ್ನೆ ಧಾರಣೆ ಮಾಡುವುದರಿಂದ ಪಾಪಕರ್ಮಗಳ ನಾಶವಾಗಿ ಮುಂದೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಭಾನುವಾರ ಉಜಿರೆಯ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಮುದ್ರಾಧಾರಣೆ ಮಾಡಿ ಆಶೀರ್ವದಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಸುಮಾರು 500ಕ್ಕೂ ಮಿಕ್ಕಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಮುದ್ರಾಧಾರಣೆ ಮಾಡಿಸಿಕೊಂಡರು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.

ಚಾತುರ್ಮಾಸ್ಯ ವ್ರತಾಚರಣೆ:ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಜುಲೈ 20ರಿಂದ ಸೆಪ್ಟೆಂಬರ್ 7ರವರೆಗೆ ಸುಬ್ರಹ್ಮಣ್ಯದ ಮೂಲಮಠದಲ್ಲಿ ಚಾತುರ್ಮಾಸ್ಯ ವೃತಾಚರಣೆ ಮಾಡಲಾಗುವುದು ಎಂದು ತಿಳಿಸಿದರು. ಭಕ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.