ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಸಿ.ರೋಡು: ವಿಜಯೇಂದ್ರ ಭೇಟಿ, ಪ್ರಚಾರ ನಾಳೆ

Published 18 ಏಪ್ರಿಲ್ 2024, 20:22 IST
Last Updated 18 ಏಪ್ರಿಲ್ 2024, 20:22 IST
ಅಕ್ಷರ ಗಾತ್ರ

ಬಂಟ್ವಾಳ: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಏ.20ರಂದು ಬಿ.ಸಿ.ರೋಡಿಗೆ ಭೇಟಿ ನೀಡಲಿದ್ದು, ಇಲ್ಲಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಅಂದು ಮಧ್ಯಾಹ್ನ 2.30ಕ್ಕೆ ನಡೆಯುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸುವರು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಈಗಾಗಲೇ ಇಲ್ಲಿನ 249 ಮತಗಟ್ಟೆ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ದಾರೆ ಎಂದರು.

ಬ್ರಿಜೇಶ್ ಚೌಟ ಅವರು ಶಾಸಕ ರಾಜೇಶ ನಾಯ್ಕ್ ಅವರೊಂದಿಗೆ ಇಲ್ಲಿನ ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರ ಸೇರಿ ಮನೆ, ಅಂಗಡಿ ಮತ್ತು ರಿಕ್ಷಾ ನಿಲ್ದಾಣಗಳಲ್ಲಿ ಮತಯಾಚಿಸಿದ್ದಾರೆ ಎಂದರು.

ಏ.22ರಂದು ಬೆಳಿಗ್ಗೆ 9 ಗಂಟೆಗೆ ಕುಲಾಲ ಸಮುದಾಯ ಮತ್ತು 10 ಗಂಟೆಗೆ ವಿಶ್ವಕರ್ಮ ಸಮುದಾಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸುವರು. 11.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಬಿ.ಸಿ.ರೋಡು - ಕೈಕಂಬ ರಿಕ್ಷಾ ಪಾರ್ಕ್ ಮತ್ತು ನಗರದಲ್ಲಿ ಮತಯಾಚನೆ ನಡೆಸಿ ಮಧ್ಯಾಹ್ನ 2.30ಕ್ಕೆ ಪ್ರಬುದ್ಧರ ಜೊತೆ ಸಂವಾದ ನಡೆಸುವರು ಎಂದರು.

ಅಂದು ಸಂಜೆ 4 ಗಂಟೆಗೆ ವಿಟ್ಲಪಡ್ನೂರು ಬಲಿಪಗುರಿ ಹಾಳೆ ತಟ್ಟೆ ಫ್ಯಾಕ್ಟರಿಗೆ ಭೇಟಿ ನೀಡಲಿದ್ದು, 5 ಗಂಟೆಗೆ ವಿಟ್ಲಪಡ್ನೂರು ಶಕ್ತಿಕೇಂದ್ರದ ಅನಂತಾಡಿ ಗೋಳಿಕಟ್ಟೆಯಲ್ಲಿ ಸಾರ್ವಜನಿಕ ಸಭೆ, ಸಂಜೆ 6.30ಕ್ಕೆ ಕೊಳ್ಳಾಡು ಮಹಾಶಕ್ತಿಕೇಂದ್ರದ ಸಾಲೆತ್ತೂರು ಜಂಕ್ಷನ್‌ನಲ್ಲಿ ಸಾರ್ವಜನಿಕ ಸಭೆ, ರಾತ್ರಿ ಗಂಟೆ 7.30ಕ್ಕೆ ಬಾಳ್ತಿಲ ನರಿಕೊಂಬು ಮಹಾಶಕ್ತಿಕೇಂದ್ರದ ಕಲ್ಲಡ್ಕ ಜಂಕ್ಷನ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮತಯಾಚನೆ ನಡೆಸುವರು ಎಂದರು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಎಂದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ದೇವಪ್ಪ ಪೂಜಾರಿ, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT