ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕಸಿತ ಭಾರತ ಸಂಕಲ್ಪಯಾತ್ರೆ

Published 19 ಡಿಸೆಂಬರ್ 2023, 14:20 IST
Last Updated 19 ಡಿಸೆಂಬರ್ 2023, 14:20 IST
ಅಕ್ಷರ ಗಾತ್ರ

ಉಜಿರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಉಜಿರೆ ಗ್ರಾಮಪಂಚಾಯಿತಿ ಮತ್ತು ಕೆನರಾ ಬ್ಯಾಂಕ್ ಸ್ಥಳೀಯ ಶಾಖೆಯಿಂದ ಸ್ವಾಗತಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಮಾತನಾಡಿ, ದೇಶಪ್ರೇಮ ಮತ್ತು ಅಭಿಮಾನ ಬೆಳೆಸಿಕೊಳ್ಳಬೇಕು. ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮಾರ್ಗದರ್ಶಿ ಅಧಿಕಾರಿ ಉಷಾ ವೈ.ನಾಯಕ್ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಲೀಡ್‌ಬ್ಯಾಂಕ್ ಪ್ರಬಂಧಕಿ ಕವಿತಾ ಎನ್.ಶೆಟ್ಟಿ, ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕಿ ಪ್ರಿಯಾ ಪೋರ್‌ವಾಲ್ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸಾಧಕರಾದ ಮೋಹನ ಕುಮಾರ್, ಅರ್ಚನಾ ಆರ್.ಪೈ, ಜನಪದ ಕಲಾವಿದ ರವೀಶ್ ಪಡುಮಲೆ, ಕ್ರೀಡಾ ಸಾಧಕಿ ಅರ್ಚನಾ, ಕೃಷಿತಜ್ಞ ರಮೇಶ್ ಭಟ್ ಅವರನ್ನು ಗೌರವಿಸಲಾಯಿತು.

ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಸ್ವಾಗತಿಸಿದರು. ಪ್ರಸಾದ್ ಬಿ.ಎಸ್. ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT