ಗುರುವಾರ , ಏಪ್ರಿಲ್ 2, 2020
19 °C
ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಾ. ಹರ್ಷ

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ವೈರಲ್ ಆಗಿದೆ ಪತ್ರ: ಸುಳ್ಳು ಎಂದ ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ‌ ಈಚೆಗೆ ನಡೆದ ಗಲಭೆಯ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿರುವ‌ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆದರೆ, ಇದೊಂದು ನಕಲಿ ಪತ್ರವಾಗಿದ್ದು, ಕಿಡಿಗೇಡಿಗಳು ಇಂತಹ ಕೃತ್ಯ ಮಾಡುತ್ತಿದ್ದಾರೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ಸ್ಪಷ್ಟಪಡಿಸಿದ್ದಾರೆ.

148 ಜನರಿಗೆ ಒಟ್ಟು ₹10 ಲಕ್ಷ ಬಹುಮಾನ ನೀಡಲಾಗಿದೆ ಎಂದು ಹೇಳಿರುವ ಈ ಪತ್ರದಲ್ಲಿ ಆದೇಶ ಸಂಖ್ಯೆಯಾಗಲಿ, ಅಧಿಕೃತ ಅಧಿಕಾರಿಯ ಸಹಿಯಾಗಲಿ ಇಲ್ಲ. ಹೀಗಾಗಿ ಇದೊಂದು ನಕಲಿ‌ ಪತ್ರ ಎಂದು ಪೊಲೀಸರು ತಿಳಿಸಿದ್ದಾರೆ.


ವೈರಲ್ ಆಗಿರುವ ನಕಲಿ ಎನ್ನಲಾದ ಪತ್ರ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು