ಶನಿವಾರ, ಮೇ 15, 2021
26 °C

ಧರ್ಮಸ್ಥಳ: ವಿಷು ಜಾತ್ರೆ ರದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ಧರ್ಮಸ್ಥಳದಲ್ಲಿ ಇದೇ 14ರಿಂದ ನಡೆಯಬೇಕಾದ ವಿಷು ಜಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಪ್ರತಿವರ್ಷ ನಡೆಯುವ ವಿಷು ಮಾಸದ ಜಾತ್ರೆ ಬಗ್ಗೆ ದೇವ ಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ, ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ ಹಾಗೂ ಅಣ್ಣಪ್ಪ ಸ್ವಾಮಿಯ ನೇಮ-ಕೋಲಗಳು ಹಾಗೂ ಮುಂದೆ ಐದು ದಿನಗಳ ಕಾಲ ನಡೆಯಬೇಕಾದ ಮಂಜುನಾಥ ಸ್ವಾಮಿ ರಥೋತ್ಸವ, ವಿವಿಧ ಕಟ್ಟೆಗಳಿಗೆ ವಿಹಾರ ಇತ್ಯಾದಿ ಕಾರ್ಯಕ್ರಮಗಳ ಜೊತೆಗೆ ನೇತ್ರಾವತಿ ನದಿಗೆ ಅವಭೃತ ವಿಹಾರ ಮಾಡುವುದನ್ನೂ ರದ್ದುಪಡಿಸಲಾಗಿದೆ. ಎಲ್ಲವನ್ನೂ ದೇವ ಪ್ರಶ್ನೆಯ ಮೂಲಕ ಶ್ರೀಸ್ವಾಮಿಯ ಒಪ್ಪಿಗೆ ಪಡೆದು ಪರಿವರ್ತನೆ ಮಾಡಲಾಗಿದೆ.

ಮುಂದಿನ ಸೂಚನೆಯ ತನಕ ದೇವಸ್ಥಾನಕ್ಕೆ ಪ್ರವೇಶ ಹಾಗೂ ದೇವರ ದರ್ಶನದ ಅವಕಾಶವನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು