ಮಂಗಳವಾರ, ಅಕ್ಟೋಬರ್ 4, 2022
26 °C
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ವಿಶ್ವಕರ್ಮ ಜಯಂತಿ

‘ರಾಷ್ಟ್ರೀಯತೆಯ ಜತೆ ಕೈಜೋಡಿಸಿದ ವಿಶ್ವಕರ್ಮ ಸಮಾಜ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ರಾಷ್ಟ್ರೀಯತೆ ಜತೆ ಕೈ ಜೋಡಿಸಿದ ಸಮಾಜವೇ ವಿಶ್ವಕರ್ಮ ಸಮಾಜ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.

ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರ ಮತ್ತು ಗ್ರಾಮಾಂತರ ಮಂಡಲದ ಸಹಕಾರದೊಂದಿಗೆ ಇಲ್ಲಿ ನಡೆದ ವಿಶ್ವಕರ್ಮ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ, ಕರ್ಮಜೀವಿಯಾಗಿ ಸಮಾಜದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಗ್ರಪಂಕ್ತಿಯಲ್ಲಿ ವಿಶ್ವಕರ್ಮರಿದ್ದಾರೆ’ ಎಂದು ಬಣ್ಣಿಸಿದರು.

ವಿಶ್ವೇಶ್ವರ ಮಾತನಾಡಿ, ವಿಶ್ವಕರ್ಮರ ಕುಲಕಸುಬು ಉಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಬಿಜಿಪಿ ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾದ ಅಧ್ಯಕ್ಷ ಆರ್ ಸಿ ನಾರಾಯಣ ರೆಂಜ ಮಾತಾನಾಡಿ, ಬಿಜೆಪಿಯು ಧರ್ಮಕ್ಕೆ ಗೌರವ ಸಲ್ಲಿಸಿ ಹಿಂದುತ್ವದ ನೆಲೆಯಲ್ಲಿ ರಾಜಕಾರಣ ಮಾಡಿದೆ ಎಂದರು.

ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಬಿಜೆಪಿ ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಕಾರ್ಯದರ್ಶಿ ಮಂಗಳಾ ಆಚಾರ್ಯ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ, ಮೋನಪ್ಪ ದೇವಸ್ಯ, ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವರಾಮ ಸಫಲ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಸುನಿಲ್ ದಡ್ಡು, ನಗರ ಪ್ರಧಾನ ಕಾರ್ಯದಶರ್ಿ ದಿವಾಕರ ಆಚಾರ್ಯ ಇದ್ದರು.

ದಿಶಾ ಸಮಿತಿಗೆ ನಾಮನಿರ್ದೇಶಿತರಾಗಿ ಆಯ್ಕೆಯಾದ ರಾಮದಾಸ ಹಾರಾಡಿ ಅವರನ್ನು ಸನ್ಮಾನಿಸಲಾಯಿತು. ರಾಜೇಶ್ ಬನ್ನೂರು ನಿರೂಪಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು