ವಿಟ್ಲ: ಸಂಸ್ಕಾರ ಮೈಗೂಡಿಸಿಕೊಂಡರೆ ಪ್ರಕೃತಿ ಚೆನ್ನಾಗಿರುತ್ತದೆ. ಹಸಿರು ಉಳಿದಾಗ ಉಸಿರಿಗೆ ಬದಲ ಬರುತ್ತದೆ. ಅದಕ್ಕಾಗಿ ಪರಿಸರ ದಿನಾಚರಣೆ ನಿತ್ಯವೂ ನಡೆಯಬೇಕಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಕನ್ಯಾನ ಒಡಿಯೂರು ಶ್ರೀ ಗುರುದೇವ ಐಟಿಐ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಮಂಗಳೂರು ವಿಭಾಗ ಆಯೋಜಿಸಿದ್ದ ವಿಭಾಗ ಮಟ್ಟದ ಗಿಡ ನೆಡುವ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣವು ಪ್ರಜ್ಞಾವಂತ ಪ್ರಜೆಗಳನ್ನು ನಿರ್ಮಾಣ ಮಾಡುತ್ತದೆಯಾದರೂ ವಿದ್ಯಾವಂತರಿಂದಲೇ ಸಮಾಜಕ್ಕೆ ಸಮಸ್ಯೆಯಾಗುತ್ತಿರುವುದು ಆಘಾತಕಾರಿ ವಿಷಯ ಎಂದು ಅವರು ಹೇಳಿದರು.

ಕೆಆರ್ಎಂಎಸ್ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಮಾಧವ ಎಂ.ಕೆ ಆಶಯ ಭಾಷಣ ಮಾಡಿದರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ.ಕೆ.ಆರ್. ಕವಿತಾ ಅಧ್ಯಕ್ಷತೆ ವಹಿಸಿದ್ದರು.

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಕೆ.ಸಿ. ಮಹದೇಶ, ಎಸ್ಬಿಎಂ ಪ್ರಸನ್ನ, ಮಂಗಳೂರು ವಿವಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಶೇಷಪ್ಪ ಅಮೀನ್ ಕೆ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾಧ್ಯಕ್ಷ ಪಿ.ಬಿ ಹರೀಶ್ ರೈ, ಪರಿಸರ ಪ್ರೇಮಿ ಮಾಧವ ಉಳ್ಳಾಲ ಉಪಸ್ಥಿತರಿದ್ದರು. ಸ್ಪರ್ಧೆಯ ಸಂಚಾಲಕಿ ಪ್ರೊ. ಶೋಭಾ ಸ್ವಾಗತಿಸಿದರು. ಗಾಯತ್ರಿ ಎನ್.ವಂದಿಸಿದರು. ಮಮತಾ ಎಂ. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.