ವಿಟ್ಲ: ‘ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎಂಬ ಅರಿವು ಸದಾ ಜಾಗೃತವಾಗಿರಬೇಕು. ಆಧ್ಯಾತ್ಮಿಕ ಶಿಕ್ಷಣದ ಜತೆಗೆ ನೈತಿಕ ಶಿಕ್ಷಣವೂ ಸಿಗಬೇಕು. ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಜಾರಿಗೊಳಿಸುವ ಸಂಬಂಧ ಠರಾವು ಮಂಡಿಸಿ ಸರ್ಕಾರಕ್ಕೆ ಕಳುಹಿಸುವ ಅಗತ್ಯ ಇದೆ’ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಸಂಸ್ಥಾನದ ಆತ್ರೇಯ ಮಂಟಪದಲ್ಲಿ ‘26ನೇ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ’ಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿದೇಶಿಯರ ಆಡಳಿತದಿಂದ ಹೊರಬರಲು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗೂಡಿಸಲು ವಂದೇ ಮಾತರಂ ಗೀತೆ ಮಹತ್ವದ ಪಾತ್ರ ನಿರ್ವಹಿಸಿತು. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ನೆನಪಿನಲ್ಲಿ ಈ ಬಾರಿಯ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹೇಳಿದರು.

ಒಡಿಯೂರು ಸ್ವಾಮೀಜಿ ತುಳುಲಿಪಿಯಲ್ಲಿ ಬರೆದ ವಂದೇ ಮಾತರಂ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಸಾಧ್ವಿ ಮಾತಾನಂದಮಯಿ ಸಾನ್ನಿಧ್ಯ ವಹಿಸಿದ್ದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕದ್ರಿ ನವನೀತ ಶೆಟ್ಟಿ, ತುಳು ಭಾಷೆ ಜಾತಿ– ಧರ್ಮಕ್ಕೆ ಸೀಮಿತವಾಗಿಲ್ಲ. ಅದು ಎಲ್ಲರ ಭಾಷೆ. ರಾಷ್ಟ್ರೀಯತೆ ಭದ್ರವಾಗಿ ಇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಇದೆ. ದೇಸಿಯತೆಗೆ ಒತ್ತು ನೀಡಿ ಭಾಷೆಯನ್ನು ಭದ್ರಪಡಿಸಬೇಕು ಎಂದು ಹೇಳಿದರು.

ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಪ್ರಧಾನ ಮಂತ್ರಿ ಹಾಗೂ
ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುವ ಠರಾವನ್ನು ಮಂಡಿಸಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಲ್ಟ್ರಾಟೆಕ್ ಸಿಮೆಂಟ್ನ ಹಿರಿಯ ಪ್ರಬಂಧಕ ಸದಾನಂದ ಸುಲಾಯ, ರಥೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಬರೋಡ, ಉಪಾಧ್ಯಕ್ಷ ವಾಮಯ್ಯ ಬಿ. ಶೆಟ್ಟಿ ಭಾಗವಹಿಸಿದ್ದರು. ನಿತ್ಯಾ ಎಸ್.ರೈ ಪ್ರಾರ್ಥನೆ ಹಾಡಿದರು. ತುಳು ಸಾಹಿತ್ಯ ಸಮ್ಮೇಳನದ ಪ್ರಧಾನ ಸಂಚಾಲಕ ಸ್ವಾಗತಿಸಿದರು. ರಥೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಮಾತೇಶ್ ಭಂಡಾರಿ ವಂದಿಸಿದರು. ಲೋಕೇಶ್ ಶೆಟ್ಟಿ
ಕಾರ್ಯಕ್ರಮ ನಿರೂಪಿಸಿದರು.

ಸಮ್ಮೇಳನದ ಉದ್ಘಾಟನೆಗೆ ಮೊದಲು ವಂದೇ ಮಾತರಂ ಗೀತೆಗೆ ಸುಳ್ಯದ ನೂಪುರ ನಾದ ಕಲಾತಂಡದಿಂದ ನೃತ್ಯ ಹಾಗೂ ಯದ್ವಿ ರೈ ಅವರಿಂದ ದೇವಿಸ್ತುತಿ ನೃತ್ಯ ನಡೆಯಿತು.

ಪೇಂಟೆದ ಪೊರ್ಲು ಹಳ್ಳಿದ ತಿರ್ಲ್ ವಿಚಾರಗೋಷ್ಠಿ: ರಾಷ್ಟ್ರೀಯತೆ-ದೇಸೀಯತೆ ವಿಚಾರಗೋಷ್ಠಿಯಲ್ಲಿ ಪೇಂಟೆದ ಪೊರ್ಲು ವಿಚಾರದ ಬಗ್ಗೆ ಶ್ರೀಕಾಂತ್ ಶೆಟ್ಟಿ ಕಾರ್ಕಳ, ಹಳ್ಳಿದ ತಿರ್ಲ್ ವಿಚಾರದ ಬಗ್ಗೆ ವಿಜೇತ್ ಶೆಟ್ಟಿ ಮಂಜನಾಡಿ ವಿಚಾರ ಮಂಡಿಸಿದರು.

ಆಕಾಶವಾಣಿಯ ನಿವೃತ್ತ ನಿರ್ದೇಶಕ ವಸಂತ ಕುಮಾರ ಪೆರ್ಲ ಅಧ್ಯಕ್ಷತೆ ವಹಿಸಿದ್ದರು.

ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದರು. ಗೀತಾ ಲಕ್ಷ್ಮೀಶ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.