ವಿಟ್ಲ: ವಿಕಸಿತ ಭಾರತ ನಿರ್ಮಾ ಣವಾಗಲು ತಳಹದಿ ಗಟ್ಟಿಯಾಗಬೇಕು ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಒಡಿಯೂರು ಸಂಸ್ಥಾನದ ರಾಜಾಂಗಣದಲ್ಲಿ ಸೋಮವಾರ ನಡೆದ ಒಡಿಯೂರು ಶ್ರೀಗುರುದೇವ ವಿದ್ಯಾಪೀಠದ ಶಾಲಾ ಆರಂಭೋತ್ಸವವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಆಧ್ಯಾತ್ಮ ಶಿಕ್ಷಣ ಎಲ್ಲರಿಗೂ ಸಿಗಬೇಕು. ನೈತಿಕ ಭಲವನ್ನು ತುಂಬುವ ಕೆಲಸ ಈ ವಿದ್ಯಾಸಂಸ್ಥೆಯಿಂದ ಆಗುತ್ತಿದೆ. ಗುರುಕುಲ ಮಾದರಿಯ ಶಿಕ್ಷಣ ಇಲ್ಲಿ ಸಿಗುತ್ತಿದೆ. ತಂತ್ರಜ್ಞಾನವೂ ಬೇಕು. ಜೊತೆಜೊತೆಗೆ ಆಧ್ಯಾತ್ಮಿಕತೆಯು ಬೆಳೆಯಬೇಕು ಎಂದರು.

ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿ, ಎರಡು ತಿಂಗಳ ಬಳಿಕ ಈ ಪರಿಸರ ಮತ್ತೆ ಜೀವಂತಿಕೆ ಪಡೆದಿದೆ. ಮಕ್ಕಳ ಯಶಸ್ಸಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣದ ಕೆಲಸ ನಮ್ಮ ವಿದ್ಯಾಪೀಠದಿಂದ ಆಗುತ್ತಿದೆ ಎಂದರು.

ಶಾಲಾ ಸಂಚಾಲಕ ಸೇರಾಜೆ ಗಣಪತಿ ಭಟ್ ಮಾತನಾಡಿ, ವ್ಯಕ್ತಿತ್ವ ನಿರ್ಮಾಣ ಶಿಕ್ಷಣದಿಂದ ಸಾಧ್ಯ. ನಮ್ಮ ಮಕ್ಕಳನ್ನು ಸಂಸ್ಕಾರ ನೀಡಿ ಸುಸಂಸ್ಕೃತರನ್ನಾಗಿ ಮಾಡಿ. ಆ ಮೂಲಕ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದರು.

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಲೋಕನಾಥ ಶೆಟ್ಟಿ ತಾಳಿಪ್ಪಾಡಿ, ಅವರ ಪತ್ನಿ ಸರಿತಾ ಲೋಕನಾಥ ಶೆಟ್ಟಿ ಭಾಗವಹಿಸಿದ್ದರು.

ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಮಕ್ಕಳನ್ನು ಹೂ ನೀಡಿ ಸ್ವಾಗತಿಸಲಾಯಿತು. 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು, ಅವರ ಪೋಷಕರನ್ನು, ಶಿಕ್ಷಕಿಯರನ್ನು ಸ್ವಾಮೀಜಿ ಗೌರವಿಸಿದರು.

ಶಾಲಾ ಶಿಕ್ಷಕರಾದ ಶೇಖರ ಶೆಟ್ಟಿ ಬಾಯಾರು ನಿರೂಪಿಸಿದರು. ಮುಖ್ಯ ಶಿಕ್ಷಕಿ ರೇಣುಕಾ ಎಸ್.ರೈ ಸ್ವಾಗತಿಸಿದರು. ಶಿಕ್ಷಕಿ ಹೇಮಾವತಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-593394084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.