ವಿಟ್ಲ: ‘ತಳಮಟ್ಟದಿಂದ ಪಕ್ಷವನ್ನು ಕಟ್ಟುವ ಮೂಲಕ ಕಾಂಗ್ರೆಸ್‌ನ ವೈಭವದ ದಿನಗಳನ್ನು ಮತ್ತೆ ಕಾಣಬೇಕು’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದರು.

ಬೊಬ್ಬೆಕೇರಿ ಸಭಾಂಗಣದಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಮಾತನಾಡಿ, ’ಅಧಿಕಾರಕ್ಕಾಗಿ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಮಾನಸಿಕವಾಗಿ ಸಿದ್ಧವಾದಾಗ ಚುನಾವಣೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಮತವನ್ನು ಖರೀದಿ ಮಾಡುವ ಹೀನ ಮಟ್ಟಕ್ಕೆ ಇಳಯಬಾರದು. ಹತ್ತು ಜನರಿಗೆ ಬೇಕಾದ ಕೆಲಸ ಮಾಡಿದಾಗ ಮಾತ್ರ ಜನರು ನೆನಪಿಡಲು ಸಾಧ್ಯ’ ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಡಾ. ರಘು, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ನವೀನ್ ಭಂಡಾರಿ, ದ. ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂಥಬೆಟ್ಟು, ಉಮಾನಾಥ ಶೆಟ್ಟಿ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್ ಇದ್ದರು. ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ. ಸ್ವಾಗತಿಸಿದರು. ಕೆ. ಪಿ. ಸಿ. ಸಿ. ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ವಂದಿಸಿದರು. ವಕ್ತಾರ ರಮಾನಾಥ ವಿಟ್ಲ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.