ವಿಟ್ಲ: ಅಳಿಕೆಯಿಂದ ಉಕ್ಕುಡ ಮಾರ್ಗವಾಗಿ ವಿಟ್ಲ, ಪುತ್ತೂರು, ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಘಟನೆ ವಿಟ್ಲ ಸಮೀಪದ ಉಕ್ಕುಡ ಮತ್ತು ಅಪ್ಪೇರಿಪಾದೆ ಮಧ್ಯೆ ಬುಧವಾರ ಸಂಭವಿಸಿದೆ.

ಬೆಳಗಿನ ಸಮಯವಾಗಿದ್ದರಿಂದ ಬಸ್ಸಿನಲ್ಲಿ ಬಹುತೇಕ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ತುಂಬಿದ್ದರು ಎನ್ನಲಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಅತಿ ವೇಗವಾಗಿ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಗೆ ಚಲಿಸಿದೆ. ಬಸ್ನ ಚಕ್ರಗಳು ಮಣ್ಣಿನಲ್ಲಿ ಹೂತಿದ್ದರಿಂದ ದೊಡ್ಡದೊಂದು ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಸ್ಥಳದಲ್ಲಿ ವಾಹನ ಸವಾರರು ಜಾಗರೂಕತೆಯಿಂದ ಚಲಿಸುವಂತೆ ಸೂಚಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-605179263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.