ವಿಟ್ಲ: ಕುದ್ದುಪದ್ದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದಿದ್ದು, ಎರಡೂ ಕಡೆಯವರಿಂದ ಮಾತಿನ ಚಕಮಕಿ ನಡೆದಿದೆ. ಈ ಬಗ್ಗೆ ದೂರು– ಪ್ರತಿದೂರು ದಾಖಲಾಗಿದೆ.

ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಪೆರುವಾಯಿ ಕಡೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಇಳಿಜಾರು ಪ್ರದೇಶ ಹಾಗೂ ತಿರುವಿನಲ್ಲಿ ಎರಡೂ ವಾಹನಗಳು ಒಟ್ಟಿಗೆ ಮುನ್ನುಗಿದ ಕಾರಣ ಅಪಘಾತವಾಗಿದೆ.

ಅಪಘಾತದ ಬಳಿಕ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಟಿಪ್ಪರ್ ಚಾಲಕ, ಬಸ್ ಚಾಲಕ ಮತ್ತು ನಿರ್ವಾಹಕರ ನಡುವೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿ ದೂರು ಪ್ರತಿದೂರು ನೀಡಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-29-1385131594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.