ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲ ಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.

ಖಚಿತ ಮಾಹಿತಿ ಆಧರಿಸಿ ವಿಟ್ಲ ಪಿಎಸ್ಐ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಸುಮಾರು 20 ರಿಂದ 25 ಮಂದಿಯ ಗುಂಪು ಸೇರಿ ಕೋಳಿ ಅಂಕದಲ್ಲಿ ತೊಡಗಿದ್ದು, ಪೊಲೀಸರನ್ನು ಕಂಡ ಕೂಡಲೇ ಓಡಲು ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಕಸಬಾ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಎಂಬುವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, ₹ 1 ಸಾವಿರ ನಗದು ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-1040325077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.