ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ದೃಷ್ಟಿರಹಿತರಿಗೆ ನೆರವಾಗಬಲ್ಲ ಸಾಧನದ ಆವಿಷ್ಕಾರ

Last Updated 5 ಜುಲೈ 2018, 12:11 IST
ಅಕ್ಷರ ಗಾತ್ರ

ಪುತ್ತೂರು: ಇಲ್ಲಿಯ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ದೃಷ್ಟಿಹೀನರಿಗೆ ನೆರವಾಗಬಲ್ಲ ಕಡಿಮೆ ವೆಚ್ಚದ ಸಾಧನವೊಂದನ್ನು ಆವಿಷ್ಕರಿಸಿದ್ದಾರೆ.

ಅಲ್ಟ್ರಾಸಾನಿಕ್ ಸಂವೇದನೆಗಳನ್ನು ಒಳಗೊಂಡಿರುವ ಸರಳ ವಾಕಿಂಗ್ ಸ್ಟಿಕ್ ಮಾದರಿಯಂತೆ ಇರುವ ಈ ಸಾಧನವನ್ನು ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಅವರ ಸಲಹೆಯಂತೆ ವಿದ್ಯಾರ್ಥಿಗಳಾದ ಅಹನ ರೈ, ಅಭಿಷೇಕ್.ಕೆ, ಅನಂತೇಶ್.ವಿ ಮತ್ತು ಮಧುಸೂದನ.ಎನ್ ಈ ಸಾಧನೆ ಮಾಡಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಪ್ರೊ.ರಾಮಚಂದ್ರ ಬಳ್ಳಾರಿ ಅವರು ಮಾರ್ಗದರ್ಶನ ನೀಡಿದ್ದಾರೆ. ಸಾಧನದ ಅಭಿವೃದ್ಧಿಗೆ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಅನುದಾನ ದೊರಕಿದೆ ಮತ್ತು ರಾಜ್ಯ ಮಟ್ಟದ ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT