ಗುರುವಾರ , ಮಾರ್ಚ್ 23, 2023
29 °C

ಮತದಾರರ ನೋಂದಣಿ: ಸಿಇಒಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ವಿವಿಧ ವಿಭಾಗಗಳ ಅಧಿಕಾರಿಗಳನ್ನು ಭಾರತ ಚುನಾವಣಾ ಆಯೋಗವು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 27 ಜನರನ್ನು ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ತಾಂತ್ರಿಕ ಅಧಿಕಾರಿ ರಾಮ ಮರಾಠಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಜಾಗೃತಿ (ಸ್ವೀಪ್) ಕಾರ್ಯಕ್ರಮದ ಭಾಗವಾಗಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಸಾಕ್ಷರತಾ ಕ್ಲಬ್ ರಚನೆ, ಕ್ಲಬ್‌ಗಳಿಗೆ ರಾಯಭಾರಿ ನೇಮಕ, ಅರಿವು ಜಾಥಾ, ಯಕ್ಷಗಾನ ವೇಷಧಾರಿಗಳ ಮೂಲಕ ಮಾಲ್, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತಿತರ ಜನದಟ್ಟಣಿ ಪ್ರದೇಶಗಳಲ್ಲಿ ಕರಪತ್ರ ಹಂಚಿಕೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಯುವ ಜನರನ್ನು ಪ್ರೇರೇಪಿಸಲಾಗಿತ್ತು. ಈ ಎಲ್ಲ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಡಾ. ಕುಮಾರ್ ಪ್ರತಿಕ್ರಿಯಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು