ಗುರುವಾರ , ಡಿಸೆಂಬರ್ 8, 2022
18 °C

ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗುರುವಾರ ಇಲ್ಲಿ ನಡೆದ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಆಯೋಜಿಸಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಚಾಲನೆ ನೀಡಿದರು. ‘ಪ್ರಜಾಪ್ರಭುತ್ವದಲ್ಲಿ ಮಕ್ಕಳೇ ಪ್ರಭುಗಳು. 18 ವರ್ಷ ತುಂಬಿದ ದೇಶದ ಪ್ರತಿಯೊಬ್ಬ ವ್ಯಕ್ತಿಗೆ ಮತದಾನದಲ್ಲಿ ಭಾಗವಹಿಸುವ ಹಕ್ಕು ಇದೆ. ಚುನಾವಣಾ ಆಯೋಗದ ನಿರ್ದೇಶನದಂತೆ, ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, 18 ವರ್ಷ ತುಂಬಿದ ವಿದ್ಯಾರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸುತ್ತಮುತ್ತಲಿನ, ಅಕ್ಕಪಕ್ಕದವರಲ್ಲೂ ಈ ಜಾಗೃತಿ ಮೂಡಿಸಬೇಕು’ ಎಂದರು.

‘ಪ್ರಜಾಪ್ರಭುತ್ವ ರಕ್ಷಣೆಯ ದೃಷ್ಟಿಯಿಂದ ಉತ್ತಮ ಸರ್ಕಾರವನ್ನು ಆಡಳಿತಕ್ಕೆ ತರಲು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ’ ಎಂದು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಚಾರ್ಯೆ ಅನಸೂಯಾ ರೈ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.