ಶುಕ್ರವಾರ, ಆಗಸ್ಟ್ 12, 2022
21 °C

ಕಿಂಡಿ ಅಣೆಕಟ್ಟೆಯಲ್ಲಿ ತ್ಯಾಜ್ಯ: ಕೃತಕ ನೆರೆಯ ಆತಂಕದಲ್ಲಿ ಸ್ಥಳೀಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ, ಚಾರ್ಮಾಡಿ, ಮುಂಡಾಜೆ, ಕಲ್ಮಂಜ ಗ್ರಾಮದಲ್ಲಿ ಮೃತ್ಯುಂಜಯ ನದಿ ಹಾಗೂ ನೇತ್ರಾವತಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಗಳಲ್ಲಿ ತ್ಯಾಜ್ಯ ಸಿಲುಕಿಕೊಂಡಿದ್ದು, ಕೃತಕ ನೆರೆ ಉಂಟಾಗುವ ಆತಂಕ ಎದುರಾಗಿದೆ.

ಶುಕ್ರವಾರ ಮಳೆಯ ಪ್ರಮಾಣ ಇಳಿಮುಖವಾಗಿದೆ. ನೀರಿನ ಹರಿವು ಕಡಿಮೆಯಾದಲ್ಲಿ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಮತ್ತೆ ನಿರಂತರ ಮಳೆ ಸುರಿಯಲಾರಂಭಿಸಿದರೆ, ಕೃತಕ ಪ್ರವಾಹ ಎದುರಾಗಬಹುದು ಎಂದು ಸ್ಥಳೀಯರು ವಿನಂತಿಸಿದ್ದಾರೆ.

ಅಡಿಕೆ ತೋಟಗಳಿಗೆ ಬೋರ್ಡೋ ಮಿಶ್ರಣ ಸಿಂಪರಣೆ ಪ್ರಾರಂಭವಾಗಿದೆ. ಕೆಲವು ತೋಟಗಳಲ್ಲಿ ಕೊಳೆ ರೋಗದ ಲಕ್ಷಣಗಳು ಕಂಡು ಬಂದಿದೆ ಎಂದು ರೈತರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು